ಹಿಂದೂ ಧರ್ಮದಿಂದ ಅನ್ಯ ಧರ್ಮಗಳಿಗೆ ಮತಾಂತರ ಆಗಿರುವವರನ್ನು ಘರ್ ವಾಪಸಿ: ಮೋಹನ್‌ ಭಾಗವತ್‌ ಕರೆ

Prasthutha|

ಲಖನೌ: ಹಿಂದೂ ಧರ್ಮದಿಂದ ಅನ್ಯ ಧರ್ಮಗಳಿಗೆ ಮತಾಂತರ ಆಗಿರುವವರನ್ನು ಪುನಃ ಹಿಂದೂ ಧರ್ಮಕ್ಕೆ ಕರೆತರಲು ಹಿಂದೂಗಳು ಪ್ರತಿಜ್ಞೆ ಮಾಡಬೇಕು ಎಂದು ಆರ್‌ಎಸ್‌ ಎಸ್‌ ಮುಖ್ಯಸ್ಥ  ಮೋಹನ್‌ ಭಾಗವತ್‌ ಕರೆ ನೀಡಿದ್ದಾರೆ.

- Advertisement -

ಚಿತ್ರಕೂಟದಲ್ಲಿ ನಡೆಯುತ್ತಿರುವ ‘ಹಿಂದೂ ಮಹಾಕುಂಭ’ದಲ್ಲಿ ಮಾತನಾಡಿದ ಅವರು, ಮಹಾಕುಂಭದಲ್ಲಿ ಪಾಲ್ಗೊಂಡಿರುವ ಸ್ವಾಮೀಜಿಗಳು ಮತ್ತು ದಾರ್ಶನಿಕರು ‘ಲವ್‌ ಜಿಹಾದ್‌, ಮತಾಂತರ’ಕ್ಕೆ ಸಂಬಂಧಿಸಿದಂತೆ ಕಳವಳ ವ್ಯಕ್ತಪಡಿಸಿ, ಹಿಂದೂ ಸಂಸ್ಕೃತಿ ಮತ್ತು ಸಂಪ್ರದಾಯವನ್ನು ರಕ್ಷಿಸುವಂತೆ ಅವರು ಆಗ್ರಹಿಸಿದರು.

Join Whatsapp