Home ಟಾಪ್ ಸುದ್ದಿಗಳು ಮುಡಾ ಸೈಟ್ ವಾಪಸ್ ಕೊಟ್ಟಿರುವುದು ರಾಜಕೀಯ ಡ್ರಾಮಾ: ವಿಜಯೇಂದ್ರ

ಮುಡಾ ಸೈಟ್ ವಾಪಸ್ ಕೊಟ್ಟಿರುವುದು ರಾಜಕೀಯ ಡ್ರಾಮಾ: ವಿಜಯೇಂದ್ರ

ಬೆಂಗಳೂರು: ಮುಡಾ ಸೈಟ್ ವಾಪಸ್ ಕೊಟ್ಟಿರುವುದು ರಾಜಕೀಯ ಡ್ರಾಮಾ. ಸಿದ್ದರಾಮಯ್ಯನವರು ಇನ್ನು ಭಂಡತನ ಬಿಟ್ಟು ರಾಜೀನಾಮೆ ಕೊಡಬೇಕು ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.


ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾನೂನಿನ ಕುಣಿಕೆಯಿಂದ ಪಾರಾಗಲು, ಅನುಕಂಪ ಪಡೆಯಲು ಸಿದ್ದರಾಮಯ್ಯ ಸೈಟ್ ವಾಪಸ್ ಕೊಡುವ ನಿರ್ಧಾರ ಕೈಗೊಂಡಿದ್ದಾರೆ. ಸ್ವಪಕ್ಷದಲ್ಲೇ ತೊಡೆ ತಟ್ಟುವವರನ್ನು ಎದುರಿಸಬೇಕು ಅಂತಾ ಅಷ್ಟೇ ಈ ಲೆಕ್ಕಾಚಾರ. ಸಿದ್ದರಾಮಯ್ಯನವರು ಇನ್ನು ಭಂಡತನ ಬಿಟ್ಟು ರಾಜೀನಾಮೆ ಕೊಡಬೇಕು. ರಾಜೀನಾಮೆ ನೀಡುವ ಮೊದಲು ಸಿಎಂ ರಾಜ್ಯಪಾಲರ ಕ್ಷಮೆ ಕೇಳಬೇಕು. ಡಿಜಿಪಿಯವರು ದೂರುದಾರ ಸ್ನೇಹಮಯಿ ಕೃಷ್ಣ ಅವರಿಗೆ ಸೂಕ್ತ ಭದ್ರತೆ ಒದಗಿಸಬೇಕು ಎಂದು ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ.


ಪಾರ್ವತಿ ಅವರು ಅವರಾಗಿಯೇ ಪತ್ರ ಬರೆದಿದ್ದಾರೋ ಅಥವಾ ಬಲವಂತವಾಗಿ ಬರೆದಿದ್ದಾರೋ ಗೊತ್ತಿಲ್ಲ. ನಾನು ಜಗ್ಗಲ್ಲ, ಬಗ್ಗಲ್ಲ ಅಂತಾ ಸಿದ್ದರಾಮಯ್ಯ ಆರ್ಭಟ ಮಾಡುತ್ತಿದ್ದರು. ನಾನ್ಯಾಕೆ ಸೈಟ್ ವಾಪಸ್ ಕೊಡಬೇಕು, ನನಗೆ 62 ಕೋಟಿ ಕೊಡುತ್ತಾರಾ ಅಂತಾ ಸಿದ್ದರಾಮಯ್ಯ ಹೇಳಿದ್ದರು. ಸಾಮಾಜಿಕ ಕಾರ್ಯಕರ್ತರು ಕೊಟ್ಟ ದೂರು, ಅದರ ಆಧಾರದಲ್ಲಿ ರಾಜ್ಯಪಾಲರು ಕೊಟ್ಟ ಅನುಮತಿ, ಕೋರ್ಟ್ ಆದೇಶ ಎಲ್ಲವೂ ಆಗಿದೆ. ಸಿದ್ದರಾಮಯ್ಯ ಸೈಟ್ ವಾಪಸ್ ಕೊಡುವ ನಿರ್ಧಾರ ಕೈಗೊಂಡಿದ್ದಾರೆ ಎಂದರೆ ಕಾನೂನಿನ ಕುಣಿಕೆಯಿಂದ ಪಾರಾಗಬೇಕು, ರಾಜಕೀಯ ಅನುಕಂಪ ಪಡೆಯಬೇಕು, ಸ್ವಪಕ್ಷದಲ್ಲೇ ತಡೆ ತಟ್ಟುವವರನ್ನು ಎದುರಿಸಬೇಕು ಅಂತಾ ಅಷ್ಟೇ. ಸೈಟ್ ವಾಪಸ್ ಕೊಟ್ಟಿರೋದು ರಾಜಕೀಯ ಡ್ರಾಮಾ ಎಂದರು.

Join Whatsapp
Exit mobile version