ರೈತ ಹೋರಾಟಕ್ಕೆ ಬೆದರಿದ ಸರಕಾರ | ಹೊಸ ಮೂರು ಕೃಷಿ ಕಾಯ್ದೆಗಳು ವಾಪಸ್

Prasthutha|

ನವದೆಹಲಿ : ರೈತರ ಹೋರಾಟಕ್ಕೆ ಬೆದರಿದ ಕೆಂದ್ರ ಸರಕಾರವು ಜಾರಿಗೊಳಿಸಿದ್ದ ಹೊಸ ಮೂರು ಕೃಷಿ ಕಾಯ್ದೆ ವಾಪಸ್  ಪಡೆದಿದೆ. ಕೃಷಿ ಕಾಯ್ದೆಗಳನ್ನು ವಾಪಾಸ್ ಪಡೆಯುವಂತೆ ದೇಶದಾದ್ಯಂತ ರೈತರು ಹೋರಾಟ ನಡೆಸಿದ್ದರು. ಇದೀಗ ರೈತರ ಹೋರಾಟಕ್ಕೆ ಮಣಿದ ಸರಕಾರ ಮೂರೂ ಕಾಯ್ದೆಗಳನ್ನು ವಾಪಸ್ ಪಡೆದಿದೆ.

- Advertisement -

ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಗೊಳಿಸಿ ಘೋಷಣೆ ಮಾಡಿದ್ದಾರೆ. ಅಲ್ಲದೇ ಹೋರಾಟದಲ್ಲಿ ನಿರತರಾಗಿರುವ ರೈತರು ಮನೆಗೆ ತೆರಳುವಂತೆ ಮನವಿ ಮಾಡಿದ್ದಾರೆ.

ಈ ಆದೇಶದಲ್ಲಿ ಪಕ್ಕಾ ರಾಜಕೀಯ ಲೆಕ್ಕಾಚಾರಗಳು ಇದೆ ಎನ್ನಲಾಗಿದ್ದು, ಮುಂಬರುವ ಪಂಜಾಬ್ , ಉತ್ತರ ಪ್ರದೇಶ ದಲ್ಲಿ ನಡೆಯಲಿರುವ ವಿಧಾನ ಸಭಾ ಚುನಾವಣೆಯಲ್ಲಿ ಸೋಲಿನ ಭಯದಿಂದ ಈ ಕಾಯ್ದೆಗಳನ್ನು ಹಿಂಪಡೆದಿದೆ ಎನ್ನುವ ಮಾತುಗಳೂ ಕೇಳಿ ಬರುತ್ತಿದೆ.



Join Whatsapp