Home ಟಾಪ್ ಸುದ್ದಿಗಳು ರೈತ ಹೋರಾಟಕ್ಕೆ ಬೆದರಿದ ಸರಕಾರ | ಹೊಸ ಮೂರು ಕೃಷಿ ಕಾಯ್ದೆಗಳು ವಾಪಸ್

ರೈತ ಹೋರಾಟಕ್ಕೆ ಬೆದರಿದ ಸರಕಾರ | ಹೊಸ ಮೂರು ಕೃಷಿ ಕಾಯ್ದೆಗಳು ವಾಪಸ್

ನವದೆಹಲಿ : ರೈತರ ಹೋರಾಟಕ್ಕೆ ಬೆದರಿದ ಕೆಂದ್ರ ಸರಕಾರವು ಜಾರಿಗೊಳಿಸಿದ್ದ ಹೊಸ ಮೂರು ಕೃಷಿ ಕಾಯ್ದೆ ವಾಪಸ್  ಪಡೆದಿದೆ. ಕೃಷಿ ಕಾಯ್ದೆಗಳನ್ನು ವಾಪಾಸ್ ಪಡೆಯುವಂತೆ ದೇಶದಾದ್ಯಂತ ರೈತರು ಹೋರಾಟ ನಡೆಸಿದ್ದರು. ಇದೀಗ ರೈತರ ಹೋರಾಟಕ್ಕೆ ಮಣಿದ ಸರಕಾರ ಮೂರೂ ಕಾಯ್ದೆಗಳನ್ನು ವಾಪಸ್ ಪಡೆದಿದೆ.

ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಗೊಳಿಸಿ ಘೋಷಣೆ ಮಾಡಿದ್ದಾರೆ. ಅಲ್ಲದೇ ಹೋರಾಟದಲ್ಲಿ ನಿರತರಾಗಿರುವ ರೈತರು ಮನೆಗೆ ತೆರಳುವಂತೆ ಮನವಿ ಮಾಡಿದ್ದಾರೆ.

ಈ ಆದೇಶದಲ್ಲಿ ಪಕ್ಕಾ ರಾಜಕೀಯ ಲೆಕ್ಕಾಚಾರಗಳು ಇದೆ ಎನ್ನಲಾಗಿದ್ದು, ಮುಂಬರುವ ಪಂಜಾಬ್ , ಉತ್ತರ ಪ್ರದೇಶ ದಲ್ಲಿ ನಡೆಯಲಿರುವ ವಿಧಾನ ಸಭಾ ಚುನಾವಣೆಯಲ್ಲಿ ಸೋಲಿನ ಭಯದಿಂದ ಈ ಕಾಯ್ದೆಗಳನ್ನು ಹಿಂಪಡೆದಿದೆ ಎನ್ನುವ ಮಾತುಗಳೂ ಕೇಳಿ ಬರುತ್ತಿದೆ.

Join Whatsapp
Exit mobile version