Home ಕರಾವಳಿ ಮತ ಎಣಿಕೆ ಕೇಂದ್ರದ ಸಿದ್ಧತೆ ಕುರಿತು ರಾಜಕೀಯ ಪಕ್ಷಗಳಿಗೆ ಮಾಹಿತಿ ನೀಡಿದ ಚುನಾವಣಾಧಿಕಾರಿ

ಮತ ಎಣಿಕೆ ಕೇಂದ್ರದ ಸಿದ್ಧತೆ ಕುರಿತು ರಾಜಕೀಯ ಪಕ್ಷಗಳಿಗೆ ಮಾಹಿತಿ ನೀಡಿದ ಚುನಾವಣಾಧಿಕಾರಿ

ಮಂಗಳೂರು: ಈಗಾಗಲೇ ಏಪ್ರಿಲ್ 26 ರಂದು ಜರುಗಿರುವ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆಯ ಮತಗಳ ಎಣಿಕೆ ಕಾರ್ಯ ಜೂನ್ 4 ರಂದು ಜರುಗಲಿದ್ದು, ಮತ ಎಣಿಕೆ ಕೇಂದ್ರದ ಸಿದ್ಧತೆ ಕುರಿತು ರಾಜಕೀಯ ಪಕ್ಷಗಳಿಗೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅವರು ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ರ ಮತ ಎಣಿಕೆ ಪ್ರಕ್ರಿಯೆಗಳ ಕುರಿತು ಅಭ್ಯರ್ಥಿಗಳ ಮತ್ತು ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆ ನಡೆಸಿ ಮಾತನಾಡಿದರು.

ಜೂನ್ 4 ರಂದು ಬೆಳಿಗ್ಗೆ ಸ್ಟ್ರಾಂಗ್ ರೂಮ್ ತೆರೆಯುವು ದರಿಂದ ಹಿಡಿದು ಸಂಜೆ ಇವಿಎಂ ಮಷಿನ್‍ಗಳು ಭದ್ರತಾ ಕೊಠಡಿಗೆ ಇರಿಸುವವರೆಗಿನ ಎಲ್ಲಾ ಹಂತಗಳನ್ನು ಚುನಾವಣಾಧಿಕಾರಿ ಮುಲೈ ಮುಗಿಲನ್ ಸಭೆಯಲ್ಲಿ ವಿವರಿಸಿದರು.

ಮತ ಎಣಿಕೆ ಪ್ರಕ್ರಿಯೆಯಲ್ಲಿ ಅನುಸರಿಸಬೇಕಾದ ನಿಯಮಗಳನ್ನು ಭಾರತ ಚುನಾವಣಾ ಆಯೋಗ ನೀಡಿದ್ದು, ಪ್ರತಿ ರಾಜಕೀಯ ಪಕ್ಷಗಳ ಮತ್ತು ಪಕ್ಷೇತರ ಅಭ್ಯರ್ಥಿಗಳು ತಮ್ಮ ಚುನಾವಣಾ ಏಜೆಂಟ್ ,ಮತ ಎಣಿಕಾ ಏಜೆಂಟರಿಗೆ ಕಡ್ಡಾಯವಾಗಿ ಚುನಾವಣಾ ಆಯೋಗ ನೀಡಿರುವ ಮಾರ್ಗಸೂಚಿಗಳನ್ನು ಪಾಲಿಸುವಂತೆ ತಿಳಿಸಬೇಕೆಂದು ಚುನಾವಣಾ ಅಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಹೇಳಿದರು.

ಭಾಗವಹಿಸುವ ಅಭ್ಯರ್ಥಿಗಳು, ಚುನಾವಣಾ ಏಜೆಂಟರು, ಮತ ಎಣಿಕೆ ಏಜೆಂಟರಿಗೆ ವಾಹನ ನಿಲುಗಡೆಗೆ, ನಿಗದಿತ ಸ್ಥಳ ಗುರುತಿಸಿ ಸಿದ್ದತೆ ಮಾಡಲಾಗಿದೆ. ಅಂದು ಮತ ಎಣಿಕಾ ಕೇಂದ್ರದ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ 144 ಕಲಂ ಅಡಿ. ನಿμÉಧಾಜ್ಞೆ ಜಾರಿಯಲ್ಲಿರುತ್ತದೆ. ಅನಗತ್ಯ ಓಡಾಟ ಮಾಡುವಂತಿಲ್ಲ ಎಂದು ಅವರು ಹೇಳಿದರು.

ಮತ ಎಣಿಕಾ ಕೇಂದ್ರದೊಳಗೆ ಮೊಬೈಲ್ ಸೇರಿದಂತೆ ಯಾವುದೇ ರೀತಿಯ ಎಲೆಕ್ಟ್ರಾನಿಕ್ ವಸ್ತು ತರುವುದನ್ನು ನಿಬರ್ಂಧಿಸಲಾಗಿದೆ ಎಂದು ತಿಳಿಸಿದರು.

ಚುನಾವಣಾ ಆಯೋಗದ ಎಲ್ಲಾ ನಿಯಮಗಳನ್ನು ಪಾಲಿಸುವ ಮೂಲಕ ಮತ ಎಣಿಕೆ ಕಾರ್ಯ ನಿಯಮಾನುಸಾರ, ಸುಗಮವಾಗಿ ಜರುಗಲು ಅಭ್ಯರ್ಥಿಗಳು ಮತ್ತು ರಾಜಕೀಯ ಪಕ್ಷಗಳು ಸಹಕಾರ ನೀಡಬೇಕೆಂದು ಅವರು ತಿಳಿಸಿದರು.

ಸಭೆಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಮತ್ತು ಪಕ್ಷೇತರ ಅಭ್ಯರ್ಥಿಗಳು ಸಭೆಯಲ್ಲಿ ಭಾಗವಹಿಸಿದ್ದರು. ಅಪರ ಜಿಲ್ಲಾಧಿಕಾರಿ ಸಂತೋಷ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

ನಿಷೇಧಾಜ್ಞೆ
ಮಂಗಳೂರು: ಕರ್ನಾಟಕ ವಿಧಾನ ಪರಿಷತ್ತಿಗೆ ಕರ್ನಾಟಕ ನೈರುತ್ಯ ಪದವೀಧರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆಯ ಸಂಬಂದ ಜೂನ್ 3ರಂದು ಮತದಾನ ನಡೆಯಲಿದ್ದು, ಜೂನ್ 6ರಂದು ಮತಎಣಿಕೆ ಪ್ರಕ್ರಿಯೆಯು ನಡೆಯಲಿದೆ.

ಚುನಾವಣೆಯನ್ನು ಮುಕ್ತ ಹಾಗೂ ನ್ಯಾಯ ಸಮ್ಮತ, ನಿಷ್ಪಕ್ಷಪಾತ ಹಾಗೂ ಶಾಂತಿಯುತ ವಾತಾವರಣದಲ್ಲಿ ನಡೆಸಲು ಅನುಕೂಲವಾಗುವಂತೆ ಹಾಗೂ ಚುನಾವಣಾ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಜೂನ್ 2ರ ಮಧ್ಯರಾತ್ರಿ 12 ಗಂಟೆಯಿಂದ ಜೂನ್ 3ರ ಮಧ್ಯರಾತ್ರಿ 12 ಗಂಟೆಯವರೆಗೆ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಆದೇಶಿಸಿದ್ದಾರೆ.

ಈ ಅವಧಿಯಲ್ಲಿ

ಐದಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ ಸಮಾರಂಭ ಜರಗಿಸುವುದನ್ನು ನಿಷೇಧಿಸಿದೆ. ಅಭ್ಯರ್ಥಿ ಅಥವಾ ಕಾರ್ಯಕರ್ತರು ಮತದಾರರನ್ನು ಮತಗಟ್ಟೆಗೆ ವಾಹನದಲ್ಲಿ ಕರೆತರುವುದು ಹಾಗೂ ಅಲ್ಲಿಂದ ಕರೆದುಕೊಂಡು ಹೋಗುವುದನ್ನು ನಿಷೇಧಿಸಿದೆ. ಶಸ್ತ್ರ, ಬಡಿಗೆ, ಬರ್ಜಿ, ಖಡ್ಗ, ಗದೆ, ಬಂದೂಕು, ಚೂರಿ, ಲಾಟಿ, ದೊಣ್ಣೆ, ಚಾಕು ಅಥವಾ ದೇಹಕ್ಕೆ ಅಪಾಯವನ್ನು ಉಂಟು ಮಾಡಬಹುದಾದ ಯಾವುದೇ ಮಾರಕಸ್ತ್ರವನ್ನು ತೆಗೆದುಕೊಂಡು ಹೋಗುವುದನ್ನು ಮತ್ತು ಅವುಗಳೊಂದಿಗೆ ತಿರುಗಾಡುವುದನ್ನು ಪ್ರತಿಬಂಧಿಸಲಾಗಿದೆ. ಮತದಾನದ ದಿನದಿಂದ ಮತಗಟ್ಟೆಗಳ 200 ಮೀಟರ್ ಒಳಗೆ ಚುನಾವಣೆ ಪ್ರಚಾರ ನಿಷೇಧಿಸಿದೆ.

ಕಲ್ಲುಗಳನ್ನು ಕ್ಷಾರ ಪದಾರ್ಥ ಇಲ್ಲವೇ ಸ್ಪೋಟಕ ವಸ್ತುಗಳನ್ನು ಯಾವುದೇ ದಾಹಕ ವಸ್ತುಗಳು ಇತ್ಯಾದಿಗಳನ್ನು ಸದರಿ ಸ್ಥಳಕ್ಕೆ ತೆಗೆದುಕೊಂಡು ಹೋಗುವುದನ್ನು ಹಾಗೂ ಶೇಖರಿಸುವುದನ್ನು ನಿಷೇಧಿಸಲಾಗಿದೆ. ಕಲ್ಲುಗಳನ್ನು ಮತ್ತು ಎಸೆಯುವಂತಹ ವಸ್ತುಗಳನ್ನು ಎಸೆಯುವ ಅಥವಾ ಬಿಡುವ ಸಾಧನಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಿದೆ. ಮನುಷ್ಯ ಶವಗಳ ಅಥವಾ ಅವುಗಳ ಆಕೃತಿ ಅಥವಾ ಪ್ರತಿಮೆಗಳ ಪ್ರದರ್ಶನ ದಹನ ಮಾಡುವುದನ್ನು ಪ್ರತಿಭಂದಿಸಲಾಗಿದೆ.

ಧ್ವನಿವರ್ಧಕಗಳನ್ನು ಬಳಸುವಂತಿಲ್ಲ. ಚುನಾವಣ ಸ್ಥಳದಲ್ಲಿ ಬಹಿರಂಗವಾಗಿ ಘೋಷಣೆ ಮಾಡುವುದು ಪದ ಹಾಡುವುದು ವಾದ್ಯ ಬಾರಿಸುವುದು ವ್ಯಾಖ್ಯಾನ ಕೊಡುವುದು ಸನ್ನೆ ಅಥವಾ ನಕಲಿ ಪ್ರದರ್ಶನವನ್ನು ಹಾಗೂ ಸಾರ್ವಜನಿಕ ಸಬ್ಯತೆ ಅಥವಾ ನೀತಿಯನ್ನು ಆಕ್ರಮಿಸಬಹುದಾದ ಕೃತ್ಯಗಳನ್ನು ಮಾಡುವುದನ್ನು ನಿಷೇಧಿಸಿದೆ.

ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಪ್ರಚೋದನಾತ್ಮಕ ಹಾಗೂ ಉದ್ರೇಕಕಾರಿ ಹಾಡುಗಳು ಕೂಗಾಟ ಮಾಡುವುದನ್ನು ಹಾಗೂ ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿತ್ರಗಳು ಚಿಹ್ನೆಗಳು, ಪ್ರತಿ ಕೃತಿಗಳು ಮುಂತಾದವುಗಳನ್ನು ಪ್ರದರ್ಶಿಸುವುದಾಗಲಿ ಅಥವಾ ಸಾರ್ವಜನಿಕ ಗಾಂಭೀರ್ಯ ಹಾಗೂ ನೈತಿಕತೆಗೆ ಭಂಗ ತರುವಂತಹ ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗುವುದನ್ನು ನಿಷೇಧಿಸಲಾಗಿದೆ. ಯಾವುದೇ ವ್ಯಕ್ತಿ ಬಹಿರಂಗವಾಗಿ ಮೇಲೆ ವಿವರಿಸಿದ ಮಾರಕಾಯಗಳು ಸ್ಪೋಟಕ ವಸ್ತುಗಳು ವಿನಾಶಕಾರಿ ವಸ್ತುಗಳು ಹಾಗೂ ಇತರೆ ಅಕ್ಷಯಪಾತ ವಸ್ತುಗಳನ್ನು ಹೊಂದಿರುವುದು ಕಂಡುಬಂದಲ್ಲಿ ಕೂಡಲೇ ಅವುಗಳನ್ನು ವಶಪಡಿಸಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಅಧಿಕಾರ ಇರುತ್ತದೆ ಅಂತಹ ಮಾರಕಸ್ತ್ರಗಳನ್ನು ಸರಕಾರಕ್ಕೆ ಮುಟ್ಟುಗೋಲು ಮಾಡಿಕೊಳ್ಳಲಾಗುವುದು ಅಲ್ಲದೆ ಸಂಬಂಧಿಸಿದ ವ್ಯಕ್ತಿಗಳ ಮೇಲೆ ಕಾನೂನು ರೀತಿಯ ಕ್ರಮ ಜರುಗಿಸಲಾಗುತ್ತದೆ.

ಚುನಾವಣಾ ಅವಧಿಯಲ್ಲಿ ಸಾರ್ವಜನಿಕ ಸಭೆಗಳನ್ನು ಕೈಗೊಳ್ಳುವಂತಿಲ್ಲ, ಮತದಾನದ ದಿನದಂದು ಮತಗಟ್ಟೆಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಮೊಬೈಲ್ ಪೋನು ಕ್ವಾಡ್ಲೆಸ್ ಫೋನ್ ಅಥವಾ ಇನ್ನಿತರ ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ. ಮತದಾನದ ದಿನದಂದು ಮತಗಟ್ಟೆಗಳ ಸುತ್ತ 200 ಮೀಟರ್ ಪರಿಮಿತಿಯಲ್ಲಿ ಪ್ರಚಾರಕ್ಕೆ ಸಂಬಂಧಿಸಿದ ಫೋಸ್ಟರ್ ಬ್ಯಾನರ್ ಅಥವಾ ಇನ್ನಾವುದೇ ವಸ್ತುಗಳನ್ನು ಬಳಸುವಂತಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಂಗ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಮಂಗಳೂರು: ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದಿರುವ ಚಿತ್ರದುರ್ಗ ಜಿಲ್ಲೆಯ ಸಾಣೆಹಳ್ಳಿ ಶ್ರೀ ಶಿವಕುಮಾರ ರಂಗಪ್ರಯೋಗ ಶಾಲೆಯಲ್ಲಿ 2024-25ನೇ ಸಾಲಿನ ರಂಗಶಿಕ್ಷಣಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹತೆಗಳು :

ಎಸ್.ಎಸ್.ಎಲ್.ಸಿ.ಯಲ್ಲಿ ಉತ್ತೀರ್ಣರಾಗಿರಬೇಕು, ಪದವೀಧರರಿಗೆ ಆದ್ಯತೆ ಇರುತ್ತದೆ, ರಂಗಭೂಮಿಯಲ್ಲಿ ಆಸಕ್ತಿ ಇದ್ದು ಸ್ವಲ್ಪಮಟ್ಟಿನ ಅನುಭವ ಇರಬೇಕು, ಅಗತ್ಯವಿರುವ ವಿದ್ಯಾರ್ಥಿನಿಯರಿಗೆ ಊಟ, ವಸತಿ ವ್ಯವಸ್ಥೆ ನೀಡಲಾಗುವುದು. ಕರ್ನಾಟಕ ಹಾಗೂ ಭಾರತ ರಂಗತಜ್ಞರಿಂದ ಮತ್ತು ಅತಿಥಿ ಉಪನ್ಯಾಸಕರಿಂದ ತರಗತಿಗಳು ನಡೆಯುತ್ತವೆ. ಗ್ರಂಥ ಬಂಡಾರ ಹಾಗೂ ದೃಶ್ಯ ಶ್ರವ್ಯ ಪರಿಕರಗಳು ಲಭ್ಯವಿದೆ. ರಂಗಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಭಾರತೀಯರ ರಂಗಭೂಮಿ, ಕನ್ನಡ ಮತ್ತು ನಾಟಕ ಸಾಹಿತ್ಯ ಪರಂಪರೆ, ಪಾಶ್ಚತ್ಯ ರಂಗಭೂಮಿ ಅಭಿನಯ, ಆಹಾರ್ಯ, ಶಿಕ್ಷಣದಲ್ಲಿ ರಂಗಭೂಮಿ ಕುರಿತಾದ ಸೈದ್ಧಾಂತಿಕ ಮತ್ತು ಪ್ರಾಯೋಗಿಕ ತರಗತಿಗಳು ನಡೆಯುತ್ತವೆ.

ಅರ್ಜಿ ಸಲ್ಲಿಸಲು ತಿತಿತಿ.ಣheಚಿಣಡಿesಛಿhooಟsಚಿಟಿehಚಿಟಟi.oಡಿg ವೆಬ್‍ಸೈಟ್ ಮೂಲಕ ಪ್ರವೇಶ ಅರ್ಜಿಗಳನ್ನು ಡೌನ್‍ಲೋಡ್ ಮಾಡಿಕೊಳ್ಳಬಹುದು ಅಥವಾ ಶ್ರೀ ಶಿವಕುಮಾರ ರಂಗ ಪ್ರಯೋಗ ಶಾಲೆ, ಸಾಣೆ ಹಳ್ಳಿ 577515, ಹೊಸದುರ್ಗ ತಾಲೂಕು, ಚಿತ್ರದುರ್ಗ ಜಿಲ್ಲೆ ಈ ವಿಳಾಸಕ್ಕೆ ಬರೆದು ಪ್ರವೇಶ ಅರ್ಜಿಗಳನ್ನು ತರಿಸಿಕೊಳ್ಳಬಹುದು. ಜೂನ್ 25 ಅರ್ಜಿ ಸಲ್ಲಿಸಲು ಕೊನೆಯ ದಿನ.

ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 9448398144, 88610433553, 9482942394 ಹಾಗು 9972007015 ಸಂಪರ್ಕಿಸುವಂತೆ ಶ್ರೀ ಶಿವಕುಮಾರ ರಂಗ ಪ್ರಯೋಗ ಶಾಲೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಡಿಪ್ಲೊಮಾ ಕೋರ್ಸ್: ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಮಂಗಳೂರು: ಪ್ರಥಮ ಸೆಮಿಸ್ಟರ್ ಇಂಜಿನಿಯರಿಂಗ್, ಡಿಪ್ಲೊಮಾ ಪೂರ್ಣಾವಧಿಯ ಕೊರ್ಸ್‍ಗಳ 2024-25ನೇ ಶೈಕ್ಷಣಿಕ ಸಾಲಿನ ಪ್ರವೇಶಾತಿಗಾಗಿ ಆನ್‍ಲೈನ್ ಹಾಗೂ ಆಫ್‍ಲೈನ್ ಮೂಲಕ ಭರ್ತಿಗೊಂಡು ಉಳಿಕೆಯಾಗಲಿರುವ ಸೀಟುಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆಫ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜೂನ್ 15ರ ವರೆಗೆ ಅವಧಿ ವಿಸ್ತರಿಸಲಾಗಿದೆ.
ಹೆಚ್ಚಿನ ಮಾಹಿತಿಗೆ ವೆಬ್‍ಸೈಟ್ hಣಣಠಿs://ಜಣeಞ.ಞಚಿಡಿಟಿಚಿಣಚಿಞಚಿ.gov.iಟಿ ಅಥವಾ ಜಣeಣeಛಿh.ಞಚಿಡಿಟಿಚಿಣಚಿಞಚಿ.gov.iಟಿ/ಣಚಿಡಿಣeಛಿhಟಿiಛಿಚಿಟ ಅಥವಾ ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್ ಮಂಗಳೂರು ಕಚೇರಿಯ ದೂರವಾಣಿ ಸಂಖ್ಯೆ: 0824-2211636, 3500437 ಸಂಪರ್ಕಿಸಬಹುದು ಎಂದು ಪಾಲಿಟೆಕ್ನಿಕ್ ನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಲೇರಿಯಾ ನಿಯಂತ್ರಣ : ಪಾಲಿಕೆಯಿಂದ ಮುಂಜಾಗ್ರತಾ ಕ್ರಮ

ಮಂಗಳೂರು: ಮಳೆಗಾಲ ಪ್ರಾರಂಭವಾಗುತ್ತಿದ್ದು, ಮಲೇರಿಯಾ, ಡೆಂಗ್ಯೂ ಇನ್ನಿತರೆ ರೋಗಗಳು ಹರಡುವ ಸಾಧ್ಯತೆಗಳಿದ್ದು, ಸಾರ್ವಜನಿಕರು ಮಲೇರಿಯಾ ನಿಯಂತ್ರಣಕ್ಕಾಗಿ ಪಾಲಿಕೆ ಮತ್ತು ಆರೋಗ್ಯ ಇಲಾಖೆಯೊಂದಿಗೆ ಕೈಜೋಡಿಸಬೇಕು.

ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ಜೆಪ್ಪು, ಬಂದರ್, ಬಿಜೈ, ಎಕ್ಕೂರು, ಪಡೀಲ್, ಕೂಳೂರು, ಶಕ್ತಿನಗರ, ಬೆಂಗ್ರೆ, ಸುರತ್ಕಲ್. ಕುಳಾಯಿ ಪ್ರದೇಶಗಳಲ್ಲಿ ಒಟ್ಟು 10 ಸಂಖ್ಯೆಯ ನಗರ ಆರೋಗ್ಯ ಕೇಂದ್ರಗಳಿದ್ದು ಮಲೇರಿಯಾ ಹಾಗೂ ಡೆಂಗ್ಯು ನಿಯಂತ್ರಣಕ್ಕಾಗಿ ದಿನನಿತ್ಯ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಮಂಗಳೂರು ಮಹಾನಗರಪಾಲಿಕೆಯಲ್ಲಿ ವಿವಿಧೋದ್ದೇಶ ಕಾರ್ಯಕರ್ತ (ಎಂ.ಪಿ.ಡಬ್ಲ್ಯು) ರಿಂದ ಮನೆ-ಮನೆಗೆ. ಶಾಲಾ ಕಾಲೇಜು, ಹೋಟೆಲು, ಆಶ್ರಮ ಹಾಗೂ ಇನ್ನಿತರ ಕಟ್ಟಡಗಳಿಗೆ ದಿನನಿತ್ಯ ಭೇಟಿ ನೀಡಿ. ಸೊಳ್ಳೆ ಉತ್ಪತ್ತಿ ತಾಣಗಳನ್ನು (ಉದಾ: ಸೀಯಾಳ ಚಿಪ್ಪು, ಹಳೆಯ ಟಯರು, ಕಪ್, ಬಾಟಲಿ, ಇತರೆ ಅನಗತ್ಯ ವಸ್ತುಗಳಲ್ಲಿ ನೀರು ನಿಂತಿರುವುದು) ನಾಶಪಡಿಸಿ, ಸಂಬಂಧಪಟ್ಟವರಿಗೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲು ಮನವರಿಕೆ ಮಾಡಲಾಗುತ್ತಿದೆ.

ಕ್ರಿಮಿನಾಶಕ ಸಿಂಪಡಣಾ ಕಾರ್ಯಕರ್ತರಿಂದ ಮದ್ದು ಸಿಂಪಡಣೆ ಹಾಗೂ ಧೂಮೀಕರಣವನ್ನು ಮಾಡಲಾಗುತ್ತಿದೆ. ಸೊಳ್ಳೆ- ಪರದೆಗಳನ್ನು ಉಪಯೋಗಿಸುವಂತೆ ಹಾಗೂ ಸೊಳ್ಳೆಗಳಿಂದ ಸ್ವಯಂ ರಕ್ಷಣೆ ಪಡೆದು ಕೊಳ್ಳುವ ಬಗ್ಗೆ ಮಾಹಿತಿ ನೀಡಲಾಗುತ್ತಿದೆ.

ನಿರ್ಮಾಣ ಹಂತದ ಕಟ್ಟಡಗಳ ಮಾಲೀಕರು, ಸಂಬಂಧಪಟ್ಟ ಗುತ್ತಿಗೆದಾರರು ಕಟ್ಟಡಗಳ ಸುತ್ತ ಮುತ್ತಲು ನೀರು ನಿಲ್ಲದ ಹಾಗೆ ಸೂಕ್ತ ಕ್ರಮಕೈಗೊಳ್ಳುವುದು. ನಿರ್ಮಾಣ ಹಂತದ ಕಟ್ಟಡಗಳಿಗೆ ಜಿಲ್ಲಾ ಮಲೇರಿಯಾ ಕಛೇರಿಯಿಂದ ತಂಡಗಳು ಭೇಟಿ ನೀಡುತ್ತಿದ್ದು, ಹೆಚ್ಚಿನ ಸೊಳ್ಳೆ ಉತ್ಪತ್ತಿ ತಾಣಗಳು ಕಂಡು ಬಂದ ವಿವರಗಳನ್ನು ಮಹಾನಗರಪಾಲಿಕೆಗೆ ತಿಳಿಸುತ್ತಿದೆ. ಮಲೇರಿಯಾ ನಿಯಂತ್ರಣ ಘಟಕದ ಮೇಲ್ವಿಚಾರಕರು ನಿರ್ಮಾಣ ಹಂತದ ಕಟ್ಟಡಗಳಿಗೆ ಭೇಟಿ ನೀಡಿ, ಪರಿಶೀಲಿಸಿ ನೋಟೀಸು ನೀಡುತ್ತಿದ್ದಾರೆ. ನಂತರವೂ ಸರಿಪಡಿಸದೇ ಇದ್ದಲ್ಲಿ ದಂಡ ವಿಧಿಸಲು ನಗರಯೋಜನಾ ವಿಭಾಗಕ್ಕೆ ಶಿಫಾರಸು ಮಾಡಲಾಗುತ್ತಿದೆ.

ಡೆಂಗ್ಯು/ಮಲೇರಿಯಾ ಪ್ರಕರಣ ಕಂಡು ಬಂದ ಪ್ರದೇಶಗಳಲ್ಲಿ 24 ಗಂಟೆಗಳೊಳಗೆ ಸುಮಾರು 30 ರಿಂದ 40 ಮನೆಗಳ ಸುತ್ತಮುತ್ತ ಧೂಮೀಕರಣ ಹಾಗೂ ಕ್ರಿಮಿನಾಶಕ ಮದ್ದನ್ನು ಕಡ್ಡಾಯವಾಗಿ ಸಿಂಪಡಿಸಲಾಗುತ್ತಿದೆ ಹಾಗೂ ಜೈವಿಕ ವಿಧಾನವಾಗಿ ಬಾವಿಗಳಿಗೆ ಗಪ್ಪಿ ಮೀನುಗಳನ್ನು ಬಿಡಲಾಗುತ್ತಿದೆ.

ಸಾರ್ವಜನಿಕರು ಮುಂಜಾಗ್ರತಾ ಕ್ರಮಗಳಾಗಿ ತಮ್ಮ ಪರಿಸರದ ಸುತ್ತ ಮುತ್ತಲು ನೀರು ನಿಲ್ಲದ ಹಾಗೆ ಹಾಗೂ ಶುಚಿತ್ವ ಕಾಪಾಡಲು ಸೂಕ್ತ ಕ್ರಮವಹಿಸಬೇಕು, ಸೊಳ್ಳೆ ಉತ್ಪತ್ತಿ ತಾಣಗಳನ್ನ ನಾಶಪಡಿಸಬೇಕು, ಸೊಳ್ಳೆ ಪರದೆಗಳ ಉಪಯೋಗ ಮಾಡುವುದು ಹಾಗೂ ಮನೆಯ ಕಿಟಕಿ, ಬಾಗಿಲುಗಳಿಗೆ ಮೆಶ್ ಅಳವಡಿಸಬೇಕು ಟಿoಟಿ-ಣoxiಛಿ iಟಿseಛಿಣ ಡಿeಠಿeಟಟಚಿಟಿಣ ಗಳ ಬಳಕೆ ಮಾಡುವುದು ಇತ್ಯಾದಿ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಮಹಾನಗರ ಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಂಬಾಕು ದುಷ್ಪರಿಣಾಮಗಳ ಜಾಗೃತಿ ಅಗತ್ಯ

ಮಂಗಳೂರು: ತಂಬಾಕು ಸೇವನೆಯಿಂದ ಆರೋಗ್ಯದ ಮೇಲೆ ಹಲವು ರೀತಿಯ ದುಷ್ಪರಿಣಾಮಗಳು ಬೀರುವುದರಿಂದ ವಿದ್ಯಾರ್ಥಿ ಸಮುದಾಯ, ಕುಟುಂಬ, ಸಮಾಜದಲ್ಲಿ ಜಾಗೃತಿ, ಅರಿವನ್ನು ಮೂಡಿಸಬೇಕು, ಇದರೊಂದಿಗೆ ಜಿಲ್ಲೆಯ ಕಾನೂನು ಸೇವೆಗಳ ಪ್ರಾಧಿಕಾರದ ಮೂಲಕ ಜನಸಾಮಾನ್ಯರಿಗೆ ಕಾನೂನು ಅರಿವನ್ನು ಮೂಡಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿಗಳಾದ ಶೋಭ ಬಿ.ಜೆ, ಅವರು ಹೇಳಿದರು.

ಅವರು ಇಂದು ನಗರದ ಸರಕಾರಿ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯ ಸಭಾಂಗಣದಲ್ಲಿ ನಡೆದ ‘ವಿಶ್ವ ತಂಬಾಕು ರಹಿತ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ|| ಹೆಚ್.ಆರ್ ತಿಮ್ಮಯ್ಯ ಪ್ರಾಸ್ತಾವಿಕವಾಗಿ ಮಾತನಾಡಿ, ಇಂದಿನ ಯುವ ಜನತೆ ತಂಬಾಕು ಉತ್ಪನ್ನಗಳ ಸೇವೆನೆ ಹಾಗೂ ದುಷ್ಪರಿಣಾಮಕ್ಕೆ ಒಳಗಾಗಿದ್ದು, ಅಮೂಲ್ಯವಾದ ಜೀವನವನ್ನು ನಾಶ ಮಾಡಿಕೊಳ್ಳುತ್ತಿದ್ದಾರೆ ಎಂದರು.

ತಂಬಾಕಿನ ಮೇಲೆ ಆಗುತ್ತಿರುವ ಅವಲಂಬನೆಯನ್ನು ನಿಲ್ಲಿಸದಿದ್ದಲ್ಲಿ ಕ್ಯಾನ್ಸರ್ ನಂತಹ ಹಲವು ರೀತಿಯ ಕಾಯಿಲೆಗಳಿಗೆ ತುತ್ತಾಗುವ ಸಾಧ್ಯತೆಯಿದೆ. ಆದ್ದರಿಂದ ಈ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಬೇಕು ಎಂದು ಸೂಚಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಸರಕಾರಿ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ|| ದಯವತಿ ಕೆ. ಮಾತನಾಡಿ, ಶಿಕ್ಷಕ ಶಿಕ್ಷಣ ಪ್ರಶಿಕ್ಷಣ ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ಸಾವಿರಾರು ಮಕ್ಕಳ ಭವಿಷ್ಯವನ್ನು ಶಿಕ್ಷಣದ ಮೂಲಕ ರೂಪಿಸಲಾಗುವುದರ ಜೊತೆಗೆ, ಆರೋಗ್ಯ ಸಂದೇಶವನ್ನು ನೀಡಬೇಕಾಗುತ್ತದೆ. ಆರೋಗ್ಯವಂತ ಸಮಾಜಕ್ಕಾಗಿ ಪ್ರಶಿಕ್ಷಣ ವಿದ್ಯಾರ್ಥಿಗಳ ಜವಾಬ್ದಾರಿ ಮಹತ್ವದಾಗಿದೆ ಎಂದರು.

ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಸಾಮಾಜಿಕ ಕಾರ್ಯಕರ್ತೆ ಶ್ರುತಿ ಜೆ ಸಾಲ್ಯಾನ್, ತಂಬಾಕು ನಿಯಂತ್ರಣ ಜಾಗೃತಿಗಾಗಿ ಪ್ರತಿಜ್ಞಾ ವಿಧಿ ಬೋಧಿಸಿದರು.

ಈ ಸಂದರ್ಭದಲ್ಲಿ “ವಿಶ್ವ ತಂಬಾಕು ರಹಿತ ದಿನಾಚರಣೆ’ಯ ಪ್ರಯುಕ್ತ ಹಮ್ಮಿಕೊಂಡಿರುವ ಕಿರುನಾಟಕ, ಕವನ ರಚನೆ, ಪೋಸ್ಟರ್ ರಚನೆ ಹಾಗೂ ಚಿತ್ರಕಲಾ ಸ್ಪರ್ಧೆಯ ವಿಜೇತರಿಗೆ ಪ್ರಶಸ್ತಿ ವಿತರಿಸಲಾಯಿತು.

ಮಂಗಳೂರಿನ ಇಂಡಿಯನ್ ಕ್ಯಾನ್ಸರ್ ಸೊಸೈಟಿ ಮುಖ್ಯಸ್ಥರು ಶೈಲಾ ಲೋಬೋ, ಮಂಗಳೂರಿನ ಸರಕಾರಿ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದ ಪಿಎಸ್‍ಟಿಇ ವಿಭಾಗದ ಮುಖ್ಯಸ್ಥರು ಶೋಭ ಕುಮಾರಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ(ಪ್ರಭಾರ) ರಾಜೇಶ್, ಮಂಗಳೂರು ತಾಲೂಕು ಆರೋಗ್ಯಾಧಿಕಾರಿ ಡಾ|| ಸುಜಯ್ ಕುಮಾರ್ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ ಕೆ ಉಳೆಪಾಡಿ ಸ್ವಾಗತಿಸಿದರು. ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರರು ಪುಂಡಲಿಕ ಲಕಾಟಿ, ಧನ್ಯವಾದ ಸಮರ್ಪಿಸಿದರು. ವಿದ್ಯಾರ್ಥಿನಿ ಸುಚಿತ್ರ ಕಾರ್ಯಕ್ರಮ ನಿರೂಪಿಸಿದರು.

Join Whatsapp
Exit mobile version