ಹೈದರಾಬಾದ್: ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಪ್ರಮಾಣ ವಚನ ಸ್ವೀಕರಿಸಿದರು.
ಹೈದರಾಬಾದಿನ ಎಲ್ ಬಿ ಕ್ರೀಡಾಂಗಣದಲ್ಲಿ ಆಯೋಜಿಸಲಾದ ಅದ್ದೂರಿ ಕಾರ್ಯಕ್ರಮದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ, ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉಪಸ್ಥಿತರಿದ್ದರು.