ಭೌತಿಕ ತರಗತಿಗಳಿಗೆ ಹಾಜರಾಗಲು ಪೋಷಕರ ಅನುಮತಿ ಕಡ್ಡಾಯ; ಕೇಂದ್ರ ಸರ್ಕಾರದಿಂದ ಪರಿಷ್ಕೃತ ಮಾರ್ಗಸೂಚಿ ಬಿಡುಗಡೆ

Prasthutha|

ನವದೆಹಲಿ; ಕೊರೊನಾ ವೈರಸ್ ಮೂರನೇ ಅಲೆಯ ತೀವ್ರತೆ ದೇಶದಲ್ಲಿ ನಿಧಾನವಾಗಿ ತಗ್ಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಶಾಲೆಗಳ ಪುನರಾರಂಭಕ್ಕೆ ಸಂಬಂಧಿಸಿದಂತೆ ಪರಿಷ್ಕೃತ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.
ಪರಿಷ್ಕೃತ ಮಾರ್ಗಸೂಚಿಗಳ ಅನುಸಾರ, ಭೌತಿಕವಾಗಿ ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗಲು ವಿದ್ಯಾರ್ಥಿಗಳ ಪೋಷಕರಿಂದ ಒಪ್ಪಿಗೆಯನ್ನು ಶಾಲೆಗಳು ಪಡೆದುಕೊಳ್ಳಬೇಕೇ ಎಂಬುದರ ಬಗ್ಗೆ ಆಯಾ ರಾಜ್ಯ ಮತ್ತು ಕೇಂದ್ರಾಡಳಿತ ಸರ್ಕಾರಗಳು ತಮ್ಮ ವ್ಯಾಪ್ತಿಯಲ್ಲೇ ನಿರ್ಧರಿಸಬಹುದು ಎಂದು ಹೇಳಿದೆ.

- Advertisement -


ವಿದ್ಯಾರ್ಥಿಗಳನ್ನು ಆನ್‌ಲೈನ್‌ನಿಂದ ಭೌತಿಕ ತರಗತಿಯ ಕಲಿಕೆಗೆ ಸುಗಮವಾಗಿ ಪರಿವರ್ತಿಸುವತ್ತ ಹೆಚ್ಚಿನ ಒತ್ತು ನೀಡಲು ಬ್ರಿಡ್ಜ್ ಕೋರ್ಸ್‌ಗಳನ್ನು ಸಿದ್ಧಪಡಿಸಲು ಹೇಳಲಾಗಿದೆ. ಹೆಚ್ಚುವರಿ ಗಮನದ ಅಗತ್ಯವಿರುವ ವಿದ್ಯಾರ್ಥಿಗಳ ಮೇಲೆ ವಿಶೇಷ ಗಮನ ಕೇಂದ್ರೀಕರಿಸುವುದು, ಪ್ರತಿ ವಿದ್ಯಾರ್ಥಿಯು ಪಠ್ಯಕ್ರಮದಲ್ಲಿರುವ ವಿಷಯಗಳಾಚೆಯೂ ಇತರೆ ವಿಷಯ ಓದಲು ಶಕ್ತರಾಗುವಂತೆ ಖಚಿತಪಡಿಸಿಕೊಳ್ಳುವುದು ಮತ್ತು ಅದಕ್ಕೆ ಸಂಬಂಧಿಸಿದಂತೆ ಪರಿಹಾರ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವುದರ ಬಗ್ಗೆ ಮಾರ್ಗಸೂಚಿಗಳಲ್ಲಿ ತಿಳಿಸಲಾಗಿದೆ.
ಮಹಾರಾಷ್ಟ್ರ, ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣ, ತಮಿಳುನಾಡಿನಲ್ಲಿ ಫೆಬ್ರವರಿ 1ರಿಂದಲೇ ಶಾಲೆಗಳು ಪುನರಾರಂಭಗೊಂಡಿದ್ದು, ಉತ್ತರಪ್ರದೇಶದ, ದೆಹಲಿಯಲ್ಲಿ ಸದ್ಯದಲ್ಲೇ ಮಕ್ಕಳು ಶಾಲೆಗಳತ್ತ ಮರಳಲಿದ್ದಾರೆ.

Join Whatsapp