ಬೆಂಗಳೂರು: ಪರಿಷ್ಕೃತ ಪಠ್ಯಪುಸ್ತಕದಲ್ಲಿ ನಾವೇನು ಸೇರಿಸಿದ್ದೇವೆ ಎಲ್ಲವನ್ನೂ ಸಾರ್ವಜನಿಕರ ಮುಂದೆ ಇಡುತ್ತೇವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.
ಪಠ್ಯ ಪುಸ್ತಕ ಪರಿಷ್ಕರಣೆ ಗೊಂದಲ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಯನ್ನು ಆರ್.ಟಿ. ನಗರದ ನಿವಾಸದಲ್ಲಿ ಮಂಗಳವಾರ ಭೇಟಿ ಮಾಡಿದ ಬಳಿಕ ಮಾತನಾಡಿದ ಅವರು, ನಾವು ಈಗಾಗಲೇ ಎರಡು ತೀರ್ಮಾನ ತೆಗೆದುಕೊಂಡಿದ್ದೇವೆ. ಜನರು ತಪ್ಪಿದೆ ಎಂದು ಹೇಳಿದ್ದನ್ನು ಬದಲಾಯಿಸುವ ಮನಸ್ಸಿದೆ ಎಂದು ಈಗಾಗಲೇ ಮುಖ್ಯಮಂತ್ರಿ ಹೇಳಿದ್ದಾರೆ. ತಪ್ಪಿದೆ ಅಂದಿದ್ದನ್ನು ನಾವು ಸರಿಪಡಿಸಿದ್ದೇವೆ ಎಂದರು.
ಪರಿಷ್ಕೃತ ಪಠ್ಯಪುಸ್ತಕ ಜನರ ಮುಂದಿಡುತ್ತೇವೆ: ಬಿ.ಸಿ. ನಾಗೇಶ್
Prasthutha|