ಬೆಂಗಳೂರು: ಅನ್ನಭಾಗ್ಯ ಯೋಜನೆಗೆ ಅಕ್ಕಿ ಕೊಡದ ಕೇಂದ್ರ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಇಂದು ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ.
ನಗರದ ಫ್ರೀಡಂ ಪಾರ್ಕ್ ನಲ್ಲಿ ಅಕ್ಕಿ ಬೇಯಿಸುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಲಾಯಿತು. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡಾ.ಪುಷ್ಪ ಅಮರನಾಥ್ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡರು. ಮಂಗಳೂರು, ಚಿಕ್ಕಮಗಳೂರು, ಮೈಸೂರು, ಶಿವಮೊಗ್ಗ, ಧಾರವಾಡ ಸೇರಿದಂತೆ ರಾಜ್ಯದ ವಿವಿಧೆಡೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.