Home ಟಾಪ್ ಸುದ್ದಿಗಳು ಧರ್ಮಸ್ಥಳದಲ್ಲಿ ಅನೈತಿಕ ಪೊಲೀಸ್ ಗಿರಿ: ರಿಕ್ಷಾ ಚಾಲಕನ ಮೇಲೆ ಸಂಘಪರಿವಾರ ಕಾರ್ಯಕರ್ತರಿಂದ ಮಾರಣಾಂತಿಕ ಹಲ್ಲೆ

ಧರ್ಮಸ್ಥಳದಲ್ಲಿ ಅನೈತಿಕ ಪೊಲೀಸ್ ಗಿರಿ: ರಿಕ್ಷಾ ಚಾಲಕನ ಮೇಲೆ ಸಂಘಪರಿವಾರ ಕಾರ್ಯಕರ್ತರಿಂದ ಮಾರಣಾಂತಿಕ ಹಲ್ಲೆ

ಬೆಳ್ತಂಗಡಿ: ಧರ್ಮಸ್ಥಳ ಬಸ್ ನಿಲ್ದಾಣಕ್ಕೆ ಬಾಡಿಗೆಗೆ ಹೋಗಿದ್ದ ಆಟೋ ರಿಕ್ಷಾ ಚಾಲಕನಿಗೆ ಸಂಘಪರಿವಾರದ ಕಾರ್ಯಕರ್ತರು ತೀವ್ರ ಹಲ್ಲೆ ನಡೆಸಿದ ಘಟನೆ ಬುಧವಾರ ರಾತ್ರಿ ನಡೆದಿದೆ.


ಉಜಿರೆಯಿಂದ ಧರ್ಮಸ್ಥಳ ಬಸ್ ನಿಲ್ದಾಣಕ್ಕೆ ರಾತ್ರಿ ಸುಮಾರು 9 ಗಂಟೆಗೆ ಡ್ರಾಪ್ ಮಾಡಿ ಹೊರಡುವಾಗ ಆಶಿಕ್ ಮೇಲೆ ಸಂಘಪರಿವಾರಕ್ಕೆ ಸೇರಿದ ಯುವಕರು ನಿನಗೆ ಹಿಂದೂ ಯುವತಿಯರೇ ಬೇಕಾ ಎಂದು ಬೆದರಿಕೆ ಹಾಕಿ ಹಲ್ಲೆ ನಡೆಸಿದ್ದಾರೆ.


ಮಾರಣಾಂತಿಕ ಹಲ್ಲೆಗೊಳಗಾದ ಮುಹಮ್ಮದ್ ಆಶಿಕ್ ಅವರನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.


ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಧರ್ಮಸ್ಥಳ ಸಬ್ ಇನ್ಸ್ಪೆಕ್ಟರ್ ಅನಿಲ್ ಕುಮಾರ್ ತಂಡದಿಂದ ಧರ್ಮಸ್ಥಳ ಸುತ್ತಮುತ್ತಲಿನ ಸಿಸಿಕ್ಯಾಮರದ ಸಹಾಯದಿಂದ ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ನಡೆಸುತ್ತಿದ್ದಾರೆ.

Join Whatsapp
Exit mobile version