Home ಕರಾವಳಿ ಉಳ್ಳಾಲ | ಲೈಟ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಮೃತ್ಯು

ಉಳ್ಳಾಲ | ಲೈಟ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಮೃತ್ಯು

ಮಂಗಳೂರು: ಬೈಕ್ ನಿಯಂತ್ರಣ ತಪ್ಪಿ  ರಸ್ತೆ ಬದಿಯ ಲೈಟ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ  ಇಂದು ಬೆಳಗ್ಗಿನ ಜಾವ  ಉಳ್ಳಾಲ ಮಾಸ್ತಿಕಟ್ಟೆ ಬಳಿ ಸಂಭವಿಸಿದೆ.

ಉಳ್ಳಾಲ ಮದನಿ ನಗರ ನಿವಾಸಿ ಮಹಮ್ಮದ್ ಕೈಫ್ ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ.

ವೇಗವಾಗಿ ಬಂದ ಬೈಕ್ ಆಟೋ ರಿಕ್ಷಾವೊಂದನ್ನು ಓವರ್ ಟೇಕ್ ಮಾಡಲು ಹೋಗಿ ರಸ್ತೆ ಬದಿ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಸವಾರ ರಸ್ತೆಗೆ ಎಸೆಯಲ್ಪಟ್ಟು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp
Exit mobile version