Home ಕರಾವಳಿ ಆಟೋ ರಿಕ್ಷಾ ಸ್ಫೋಟ ಪ್ರಕರಣದ ತನಿಖೆ ಎನ್‌ಐಎಗೆ ಹಸ್ತಾಂತರ: ನಳಿನ್‌ ಕುಮಾರ್‌

ಆಟೋ ರಿಕ್ಷಾ ಸ್ಫೋಟ ಪ್ರಕರಣದ ತನಿಖೆ ಎನ್‌ಐಎಗೆ ಹಸ್ತಾಂತರ: ನಳಿನ್‌ ಕುಮಾರ್‌

ಮಂಗಳೂರು: ಆಟೊರಿಕ್ಷಾ ಸ್ಫೋಟ ಪ್ರಕರಣದ ತನಿಖೆ ಎನ್‌ಐಎಗೆ ಹಸ್ತಾಂತರಿಸಲಾಗಿದೆ ಎಂದು  ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್‌ ಕಟೀಲ್ ಹೇಳಿದ್ದಾರೆ.

 ಈ ಕುರಿತು ಟ್ವೀಟ್ ಮಾಡಿದ ಅವರು, ಮಂಗಳೂರಿನ ಗರೋಡಿ ಎಂಬಲ್ಲಿ ಆಟೋ ರಿಕ್ಷಾ ಸ್ಫೋಟ ಪ್ರಕರಣದ ತನಿಖೆಯನ್ನು ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ನಡೆಸಲಿದೆ ಎಂದು ಹೇಳಿದ್ದಾರೆ.

‘ಈ ಕೃತ್ಯದ ಹಿಂದಿರುವ ಮೂಲಭೂತವಾದಿಗಳ ಜಾಡನ್ನು ಪತ್ತೆಹಚ್ಚಲು ಎನ್‌ಐಎ ತನಿಖೆಯಿಂದ ನೆರವಾಗಲಿದೆ. ಬಾಂಬ್ ಸ್ಫೋಟದ ಹಿಂದೆ ಅಂತರರಾಜ್ಯ ದೇಶದ್ರೋಹಿಗಳ ಕೈವಾಡ ಪತ್ತೆ ಹಚ್ಚಲು ಎನ್‌ಐಎ ಕಾರ್ಯತತ್ಪರವಾಗಿದೆ. ನಮ್ಮ ಉನ್ನತ ಪೊಲೀಸ್ ಅಧಿಕಾರಿಗಳು ಸಹಕರಿಸುತ್ತಿದ್ದಾರೆ.

ಮಂಗಳೂರಿನಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗಿದೆ. ಯಾವುದೇ ಭಯೋತ್ಪಾದಕ ಕೃತ್ಯ ನಡೆಸಲು ಪ್ರಯತ್ನಿಸುವವರ ಜನ್ಮ ಜಾಲಾಡಿ ಶಾಶ್ವತವಾಗಿ ಅವರು ನೆನಪಿಡುವ ಕ್ರಮ ಜರುಗಿಸಲಾಗುವುದು.’

‘ಭಯೋತ್ಪಾದಕ ಕೃತ್ಯ ಮಾಡುವ ಮೂಲಕ ರಾಜ್ಯಕ್ಕೆ ಕೆಟ್ಟ ಹೆಸರು ತರುವ ಮತಾಂಧರ ಪ್ರಯತ್ನ ಜಾರಿಯಾಗಲು ಬಿಡುವುದಿಲ್ಲ. ದೇಶದ್ರೋಹಿ ಸಂಘಟನೆಗಳನ್ನು ನಿಷೇಧ ಮಾಡಿದ ಬಳಿಕ ವಿಧ್ವಂಸಕ ಕೃತ್ಯಗಳನ್ನು ಮಾಡಿ ಬಾಲ ಬಿಚ್ಚಲು ಕೆಲವರು ಹೊರಟಿದ್ದಾರೆ. ಭಯೋತ್ಪಾದನೆಯ ವಿರುದ್ಧದ ನಮ್ಮ ಸಮರದಲ್ಲಿ ನಾಗರಿಕರ ಸಹಕಾರ ಮುಖ್ಯ. ಕರ್ನಾಟಕದಲ್ಲಿ ನಮ್ಮ ಪೊಲೀಸ್ ಇಲಾಖೆ ಮಂಗಳೂರಿನ ಸ್ಫೋಟದ ಮೂಲ ಪತ್ತೆಹಚ್ಚುವಲ್ಲಿ ನಿರತವಾಗಿದ್ದು, ಕೇಂದ್ರದಿಂದ ಅಗತ್ಯ ನೆರವು ನೀಡಲಾಗಿದೆ’ ಎಂದು ಅವರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

Join Whatsapp
Exit mobile version