ಹೆಚ್ಚಿನ ಚಿಕಿತ್ಸೆಗಾಗಿ ರಿಷಭ್‌ ಪಂತ್ ಮುಂಬೈ ಆಸ್ಪತ್ರೆಗೆ ಸ್ಥಳಾಂತರ

Prasthutha|

- Advertisement -

ಮುಂಬೈ: ಭಾರತ ಕ್ರಿಕೆಟ್ ತಂಡದ ವಿಕೆಟ್‌ ಕೀಪರ್ ರಿಷಭ್‌ ಪಂತ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬುಧವಾರ ಡೆಹ್ರಾಡೂನ್‌ ನಿಂದ ಮುಂಬೈಗೆ ವಿಮಾನ ಮೂಲಕ ಸ್ಥಳಾಂತರಿಸಲಾಗಿದೆ.

ಪಂತ್ ಅವರ ಕಾಲುಗಳ ಅಸ್ಥಿಮಜ್ಜೆಯಲ್ಲಿ ಊತ ಇರುವುದು ಎಂಆರ್‌ಐ ಸ್ಕ್ಯಾನಿಂಗ್‌ನಲ್ಲಿ ಪತ್ತೆಯಾಗಿರುವುದರಿಂದ ಉನ್ನತಮಟ್ಟ ಚಿಕಿತ್ಸೆಗಾಗಿ ಅವರನ್ನು ಮುಂಬೈಗೆ ಸ್ಥಳಾಂತರಿಸಲಾಗಿದೆ ಎಂದು ವರದಿಯಾಗಿದೆ.

- Advertisement -

ಡಿ.30ರ ಬೆಳಗ್ಗೆ BMW ಕಾರಿನಲ್ಲಿ ಮನೆಗೆ ತೆರಳುವಾಗ ಉತ್ತರಾಖಂಡ್‌ನ ರೂರ್ಕಿ ಬಳಿ ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದಿತ್ತು. ಅಪಘಾತಕ್ಕೀಡಾದ ಕ್ಷಣಾರ್ಧದಲ್ಲೇ ಕಾರು ಹೊತ್ತಿ ಉರಿದಿತ್ತು. ಈ ಘಟನೆಯಲ್ಲಿ ಅದೃಷ್ಟವಶಾತ್​ ಪ್ರಾಣಾಪಾಯದಿಂದ ಪಾರಾದ ರಿಷಬ್ ಪಂತ್, ಗಂಭೀರ ಗಾಯಗೊಂಡಿದ್ದರು. ತಲೆ, ಮಂಡಿ, ಬೆನ್ನು, ಕಾಲಿಗೆ ಗಾಯವಾಗಿತ್ತು.

ಪಂತ್ ಅವರ ಮುಖದ ಗಾಯಗಳಿಗೆ ಚಿಕಿತ್ಸೆ ನೀಡಲಾಗಿದ್ದು, ಪ್ಲಾಸ್ಟಿಕ್ ಸರ್ಜರಿ ಮಾಡಲಾಗಿದೆ.

Join Whatsapp