ಶ್ರೀನಗರ: ಕಾಶ್ಮೀರ ಕಣಿವೆಯಲ್ಲಿ ತಾಪಮಾನ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜುಲೈ 8 ರಿಂದ ಹಿರಿಯ ಮಾಧ್ಯಮಿಕ ಹಂತದವರೆಗಿನ ಎಲ್ಲಾ ಶಾಲೆಗಳಿಗೆ 10 ದಿನಗಳವರೆಗೆ ಬೇಸಿಗೆ ರಜೆ ಘೋಷಿಸಲಾಗಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ಕಾಶ್ಮೀರ ಕಣಿವೆಯ ಈ ಬೇಸಿಗೆಯಲ್ಲಿ ವಾಡಿಕೆಗಿಂತ ತಾಪಮಾನ ಹೆಚ್ಚಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಭಾನುವಾರ 32.7 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿತ್ತು.
ಕಾಶ್ಮೀರ ವಿಭಾಗದಲ್ಲಿ ಬರುವ ಎಲ್ಲಾ ಸರ್ಕಾರಿ ಮತ್ತು ಮಾನ್ಯತೆ ಪಡೆದ ಖಾಸಗಿ ಶಾಲೆಗಳಿಗೆ ಜುಲೈ 08 ರಿಂದ 17ರವರೆಗೆ ರಜೆ ನೀಡಲಾಗಿದೆ. ಅಗತ್ಯವಿದ್ದಲ್ಲಿ ವಿದ್ಯಾರ್ಥಿಗಳಿಗೆ ಆನ್ ಲೈನ್ ಮೂಲಕ ತರಗತಿ ನಡೆಸಬಹುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.