ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು: ಇಬ್ಬರು ವೈದ್ಯರು ಮೃತ್ಯು

Prasthutha|

- Advertisement -

ಕೊಚ್ಚಿ: ಕಾರೊಂದು ಪೆರಿಯಾರ್ ನದಿಗೆ ಬಿದ್ದು ಇಬ್ಬರು ವೈದ್ಯರು ಮೃತಪಟ್ಟಿರುವ ಘಟನೆ ಕೇರಳದ ಕೊಚ್ಚಿಯಲ್ಲಿ ನಡೆದಿದೆ.

ಇದೇ ವೇಳೆ ಇನ್ನೂ ಮೂವರು ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -

ಮೃತರನ್ನು ಅದ್ವೈತ್ (29) ಮತ್ತು ಅಜ್ಮಲ್ (29) ಎಂದು ಗುರುತಿಸಲಾಗಿದೆ. ಇವರು ಖಾಸಗಿ ಆಸ್ಪತ್ರೆಯ ವೈದ್ಯರಾಗಿದ್ದರು.
ಡಾ.ಅದ್ವೈತ್ ಕಾರು ಚಾಲನೆ ಮಾಡುತ್ತಿದ್ದು, ಮೊಬೈಲ್ ನ ಗೂಗಲ್ ಮ್ಯಾಪ್ ಆನ್ ಮಾಡಿದ್ದರು ಎಂದು ಹೇಳಲಾಗುತ್ತಿದೆ.

ಗೋತುರುತ್‌ನಲ್ಲಿ ಭಾರೀ ಮಳೆಯಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಗೋಚರತೆ ಕೂಡ ತುಂಬಾ ಕಡಿಮೆ ಇತ್ತು. ಕಾರು ಚಲಾಯಿಸುತ್ತಿದ್ದ ಯುವಕ ಗೂಗಲ್ ಮ್ಯಾಪ್ ತೋರಿಸಿದ ಮಾರ್ಗದಲ್ಲಿ ಹೋಗುತ್ತಿದ್ದ. ಎಡ ತಿರುವಿನಲ್ಲಿ ಕಾರನ್ನು ತಿರುಗಿಸಬೇಕಾಗಿದ್ದರೂ ಆಕಸ್ಮಿಕವಾಗಿ ಮುಂದೆ ಹೋಗಿದ್ದರಿಂದ ಕಾರು ನದಿಗೆ ಬಿದ್ದಿದೆ.