ನದಿಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು: ಮುಗಿಲು ಮುಟ್ಟಿದ್ದ ಪೋಷಕರ ಆಕ್ರಂದನ

Prasthutha|

ಮೈಸೂರು ; ಕಾವೇರಿ ನದಿ ನೀರಿನಲ್ಲಿ ಮುಳುಗಿ ಇಬ್ಬರು ಬಾಲಕರಿಬ್ಬರು ಸಾವನ್ನಪ್ಪಿರುವ ಘಟನೆ ತಲಕಾಡಿನ ಕಾವೇರಿ ನಿಸರ್ಗಧಾಮದಲ್ಲಿ ನಡೆದಿದೆ.

- Advertisement -

ಮೈಸೂರು ಜಿಲ್ಲೆ ಟಿ. ನರಸೀಪುರ ತಾಲೂಕಿನ ತಲಕಾಡಿಗೆ ಈಜಲು ತೆರಳಿದ್ದ ಲೋಹಿತ್(15), ಯತೀಶ್(13) ಸಾವನ್ನಪ್ಪಿದ್ದಾರೆ.

ಬೆಂಗಳೂರಿನ ನಂದಿನಿ ಲೇಔಟ್ ನಿವಾಸಿ ರವಿಗೌಡರ ಪುತ್ರರು, ಸ್ನೇಹಿತರ ಜೊತೆ ಬೆಂಗಳೂರಿನಿಂದ ತಲಕಾಡಿಗೆ ಆಗಮಿಸಿದ್ದ ಬಾಲಕರು, ಈಜಲು ನದಿಗೆ ಇಳಿದಿದ್ದರು. ಈ ವೇಳೆ ನದಿಯಲ್ಲಿ ಮುಳುಗಿ ದುರಂತ ಅಂತ್ಯ ಕಂಡಿದ್ದಾರೆ. ಇನ್ನು ಅಲ್ಲೇ ಇದ್ದ ಅಂಬಿಗರಿಂದ 6 ಬಾಲಕರ ರಕ್ಷಣೆ ಮಾಡಲಾಗಿದೆ.

- Advertisement -

ಮಕ್ಕಳ ಮೃತದೇಹ ಕಂಡು ಪೋಷಕರ ಆಕ್ರಂಧನ ಮುಗಿಲು ಮುಟ್ಟಿದೆ. ಈ ಕುರಿತು ತಲಕಾಡು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp