ಲಖ್ನೋ: ಉತ್ತರ ಪ್ರದೇಶ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು RLD(ರಾಷ್ಟ್ರೀಯ ಲೋಕದಳ) ಸ್ಪಷ್ಟಪಡಿಸಿದೆ.
ಪ್ರಿಯಾಂಕಾ ಗಾಂಧಿ ಜೊತೆ ಮಾತುಕತೆ ನಡೆಸಿದ ಬಗ್ಗೆ ಪ್ರತಿಕ್ರಿಯಿಸಿದ RLD ಅಧ್ಯಕ್ಷ ಜಯಂತ್ ಚೌಧರಿ, ಕಾಂಗ್ರೆಸ್ ನಾಯಕಿಯ ಭೇಟಿಯಲ್ಲಿ ವಿಶೇಷತೆಯೇನೂ ಇಲ್ಲ ಎಂದಿದ್ದಾರೆ. ಇತ್ತೀಚೆಗೆ ಪ್ರಿಯಾಂಕಾ ಗಾಂಧಿ ಜಯಂತ್ ಚೌಧರಿ ಅವರನ್ನು ಭೇಟಿ ಮಾಡಿದ್ದರು.
RLD ಎಸ್ಪಿ ಜೊತೆ ಮೈತ್ರಿ ಮಾಡಿಕೊಂಡಿದ್ದು, ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಅವರು ಹೇಳಿದ್ದಾರೆ. ಉತ್ತರ ಪ್ರದೇಶ ಸೇರಿದಂತೆ ಏಳು ರಾಜ್ಯಗಳಲ್ಲಿ 2022ಕ್ಕೆ ಚುನಾವಣೆ ನಿಗದಿಯಾಗಿದೆ.
ಇತ್ತೀಚೆಗಷ್ಟೇ ನಡೆದ ಉಪಚುನಾವಣೆಯಲ್ಲಿ ಮುಖಭಂಗ ಅನುಭವಿಸಿರುವ ಬಿಜೆಪಿ, ಮುಂಬರುವ ಚುನಾವಣೆಯಲ್ಲಿ ತನ್ನ ಪ್ರಾಬಲ್ಯವನ್ನು ಗಟ್ಟಿ ಮಾಡಿಕೊಳ್ಳಲು ಹವಣಿಸುತ್ತಿದೆ.