ರೈತರ ಪ್ರತಿಭಟನೆ | ಮೋದಿ ಸರಕಾರದ ವೈಖರಿಗೆ ಆಕ್ರೋಶ ವ್ಯಕ್ತಪಡಿಸಿ ಎನ್ ಡಿಎ ತೊರೆದ ರಾಷ್ಟ್ರೀಯ ಲೋಕತಾಂತ್ರಿಕ ಪಕ್ಷ

Prasthutha|

ಜೈಪುರ : ಪ್ರಧಾನಿ ನರೇಂದ್ರ ಮೋದಿ ಸರಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಕೇಂದ್ರ ಸರಕಾರ ನಡೆಸಿಕೊಳ್ಳುತ್ತಿರುವ ರೀತಿಗೆ ಆಕ್ರೋಶ ವ್ಯಕ್ತಪಡಿಸಿ, ರಾಷ್ಟ್ರೀಯ ಲೋಕತಾಂತ್ರಿಕ ಪಕ್ಷವು ಎನ್ ಡಿಎ ಮೈತ್ರಿಕೂಟ ತೊರೆದಿದೆ. ಹನುಮಾನ್ ಬೆನಿವಾಲ್ ನೇತೃತ್ವದ ರಾಷ್ಟ್ರೀಯ ಲೋಕತಾಂತ್ರಿಕ ಪಕ್ಷವು ಬಿಜೆಪಿ ನೇತೃತ್ವದ ಎನ್ ಡಿಎ ತೊರೆದಿದೆ.

ಹನುಮಾನ್ ಬೆನಿವಾಲ್ ಈಗಾಗಲೇ ಮೂರು ಸಂಸದೀಯ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದರು. ಹಲವು ಬಾರಿ ಕೇಂದ್ರ ಸರಕಾರಕ್ಕೆ ಈ ಕುರಿತಂತೆ ಎಚ್ಚರಿಕೆ ನೀಡಿದ್ದರು. ಆದರೆ, ಯಾವುದೇ ಫಲ ನೀಡದಿರುವ ಹಿನ್ನೆಲೆಯಲ್ಲಿ ಅವರು ಈ ನಿರ್ಧಾರ ಕೈಗೊಂಡಿದ್ದಾರೆ.

- Advertisement -