Home ಟಾಪ್ ಸುದ್ದಿಗಳು ರಸ್ತೆ ಅಪಘಾತ: ಬಿಆರ್‌ಎಸ್ ಶಾಸಕಿ ಲಾಸ್ಯ ನಂದಿತಾ ಮೃತ್ಯು

ರಸ್ತೆ ಅಪಘಾತ: ಬಿಆರ್‌ಎಸ್ ಶಾಸಕಿ ಲಾಸ್ಯ ನಂದಿತಾ ಮೃತ್ಯು

ಹೈದರಾಬಾದ್: ತೆಲಂಗಾಣದ ಬಿಆರ್​ಎಸ್​ ಪಕ್ಷದ ಶಾಸಕಿ ಲಾಸ್ಯ ನಂದಿತಾ (33)ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಹೈದರಾಬಾದ್ ಒಆರ್‌ಆರ್‌ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಆಕೆ ಪ್ರಯಾಣಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಅತಿವೇಗದಲ್ಲಿ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದಿದ್ದರಿಂದ ಲಾಸ್ಯ ಸ್ಥಳದಲ್ಲೇ ಸಾವನ್ನಪ್ಪಿದ್ದು, ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ.

ಇತ್ತೀಚೆಗಷ್ಟೇ ಶಾಸಕಿ ಬಿಆರ್‌ಎಸ್ ನಲ್ಗೊಂಡ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ, ಬಳಿಕ ಮನೆಗೆ ಮರಳುತ್ತಿದ್ದಾಗ ಅವರ ಕಾರು ಅಪಘಾತಕ್ಕೀಡಾಗಿತ್ತು. ಆದರೆ ಆಕೆ ಸುರಕ್ಷಿತವಾಗಿ ಅಪಘಾತದಿಂದ ಪಾರಾಗಿದ್ದರು. ಆ ಸಂದರ್ಭದಲ್ಲಿ ಕರ್ತವ್ಯದಲ್ಲಿದ್ದ ಗೃಹರಕ್ಷಕ ದಳದ ಸಿಬ್ಬಂದಿ ಮೃತಪಟ್ಟಿದ್ದರು. ಆದರೆ ಶುಕ್ರವಾರ ಬೆಳಗ್ಗೆ ಸಂಭವಿಸಿದ ಅಪಘಾತದಲ್ಲಿ ಆಕೆ ದಾರುಣವಾಗಿ ಸಾವಿಗೀಡಾಗಿದ್ದಾರೆ.

Join Whatsapp
Exit mobile version