ಕಾರು-ಲಾರಿ ಮುಖಾಮುಖಿ ಡಿಕ್ಕಿ, ಇಬ್ಬರು ಸಾವು

Prasthutha|

ಹಾವೇರಿ: ಲಾರಿ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಸ್ಥಳದಲ್ಲಿಯೇ ಇಬ್ಬರು ಸಾವಿಗೀಡಾಗಿದ್ದಾರೆ. ಮೂವರಿಗೆ ಗಂಭೀರ ಗಾಯಗಳಾಗಿವೆ.

- Advertisement -

ಹಾವೇರಿ ಜಿಲ್ಲೆ ರಾಣೆಬೆನ್ನೂರ ತಾಲೂಕಿನ ಮೇಡ್ಲೇರಿ-ಅಂಕಸಾಪುರ ಗ್ರಾಮದ ಬಳಿ ಘಟನೆ ನಡೆದಿದೆ. ಹಾವೇರಿ ಜಿಲ್ಲೆ ಸವಣೂರ ತಾಲೂಕಿನ ಜಲ್ಲಾಪುರ ಗ್ರಾಮದ ಮಾಲತೇಶ ಕುದರಿಹಳ್ಳಿ (29) ಹಾಗೂ ಮಾಲತೇಶ ಗೌಡಗೇರಿ (24) ಮೃತರು. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಾಣೆಬೆನ್ನೂರು ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Join Whatsapp