ತುಮಕೂರು ಬಳಿ ರಸ್ತೆ ಅಪಘಾತ: ಸಂತ್ರಸ್ತ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ: ಮುಖ್ಯಮಂತ್ರಿ ಬೊಮ್ಮಾಯಿ

Prasthutha|

ಬೆಂಗಳೂರು: ತುಮಕೂರು ಬಳಿ ಸಂಭವಿಸಿರುವ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಹಾಗೂ ಗಾಯಾಳುಗಳಿಗೆ ಸಂಪೂರ್ಣ ಚಿಕಿತ್ಸೆ ವೆಚ್ಚವನ್ನು ಸರ್ಕಾರದಿಂದಲೇ ಭರಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

- Advertisement -

ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

ತುಮಕೂರು ಬಳಿ 9 ಕೂಲಿ ಕಾರ್ಮಿಕರು ತೀವ್ರವಾದ ರಸ್ತೆ ಅಪಘಾತದಲ್ಲಿ ಅಸುನೀಗಿದ್ದಾರೆ. ಇದು ಬಹಳ ದುರ್ದೈವದ ಸಂಗತಿ. ದುಡಿಮೆ ಮಾಡಲು ಬಂದವರ ಬದುಕೇ ಇಲ್ಲದಂತಾಗಿರುವುದು ದಿಗ್ಭ್ರಮೆ ಹುಟ್ಟಿಸಿದೆ. ಅಪಘಾತದಲ್ಲಿ ಗಾಯಗೊಂಡವರ ಚಿಕಿತ್ಸೆಗೆ ಎಲ್ಲ ವ್ಯವಸ್ಥೆ ಮಾಡಲಾಗಿದೆ. ಮೃತಪಟ್ಟವರಿಗೆ ಪ್ರಧಾನಮಂತ್ರಿಯವರು ಟ್ವೀಟ್ ಮೂಲಕ ಸಂತಾಪ ಸೂಚಿಸಿ, ಮೃತಪಟ್ಟವರಿಗೆ ತಲಾ 2 ಲಕ್ಷ ರೂ ಹಾಗೂ ಗಾಯಗೊಂಡವರಿಗೆ ತಲಾ 50,000 ರೂ. ಪರಿಹಾರ ನೀಡಿದ್ದಾರೆ. ಇದಕ್ಕಾಗಿ ಪ್ರಧಾನ ಮಂತ್ರಿಯವರನ್ನು ಅಭಿನಂದಿಸುತ್ತೇನೆ. ಅಪಘಾತದ ಬಗ್ಗೆ ಸಂಪೂರ್ಣ ತನಿಖೆ ನಡೆಸಲು ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದರು.

- Advertisement -

ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ನಡೆಸಲು ಅನುಮತಿ ನೀಡುವ ಬಗ್ಗೆ ಪ್ರತಿಕ್ರಿಯೆ ನೀಡಿ, ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಸದ್ಯದಲ್ಲಿಯೇ ಸೂಕ್ತ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು.

Join Whatsapp