ರಸ್ತೆಗಳು ಕತ್ರಿನಾ ಕೈಫ್ ಕೆನ್ನೆಯಂತೆ ಇರಲಿವೆ: ವಿವಾದಾತ್ಮಕ ಹೇಳಿಕೆ ನೀಡಿದ ರಾಜಸ್ಥಾನ ಸಚಿವ

Prasthutha|

ಜೈಪುರ: ನಿನ್ನೆಯಷ್ಟೇ ಪ್ರಮಾಣ ವಚನ ಸ್ವೀಕರಿಸಿದ ರಾಜಸ್ಥಾನ ಸಚಿವ ರಾಜೇಂದ್ರ ಸಿಂಗ್ ಭಾರೀ ವಿವಾದವೊಂದರಲ್ಲಿ ಸಿಲುಕಿದ್ದಾರೆ.

- Advertisement -

ತಮ್ಮ ಕ್ಷೇತ್ರದಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಚಿವರು, ಕ್ಷೇತ್ರದ ರಸ್ತೆಗಳು ನಟಿ ಕತ್ರಿನಾ ಕೈಫ್ ಅವರ ಕೆನ್ನೆಯಂತೆ ಇರಲಿವೆ ಎಂದು ಹೇಳಿದ್ದಾರೆ. ಇದರೊಂದಿಗೆ ಸಿಂಗ್ ಹೇಳಿಕೆಯ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ.
ರಾಜೇಂದ್ರ ಸಿಂಗ್ ಅವರು ರಾಜಸ್ಥಾನದ ಉದಯಪುರ ಕ್ಷೇತ್ರದ ಶಾಸಕರಾಗಿದ್ದಾರೆ. ಸಚಿನ್ ಪೈಲಟ್ ಒತ್ತಾಯದ ಮೇರೆಗೆ ಗೆಹ್ಲೋಟ್ ಸಚಿವ ಸಂಪುಟವನ್ನು ಪುನಾರಚಿಸಿದ್ದರು.

ರಾಜಕಾರಣಿಗಳು ನಟಿಯರನ್ನು ರಸ್ತೆಗೆ ಹೋಲಿಸುವುದು ಇದೇ ಮೊದಲಲ್ಲ. 2005ರಲ್ಲಿ RJD ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಇದೇ ರೀತಿಯ ಹೇಳಿಕೆ ನೀಡಿದ್ದರು. ಬಿಹಾರದ ರಸ್ತೆಗಳು ಹೇಮಾ ಮಾಲಿನಿಯ ಕೆನ್ನೆಯಂತಾಗಲಿದೆ ಎಂದು ಅವರು ಹೇಳಿದ್ದರು.



Join Whatsapp