ಸೌರವ್ ಗಂಗೂಲಿ ಬದಲಿಗೆ ರೋಜರ್ ಬಿನ್ನಿ ಬಿಸಿಸಿಐ ಅಧ್ಯಕ್ಷರಾಗುವ ಸಾಧ್ಯತೆ

Prasthutha|

ಮುಂಬೈ: ಸೌರವ್ ಗಂಗೂಲಿ ಬದಲಿಗೆ ಭಾರತದ ಮಾಜಿ ಕ್ರಿಕೆಟಿಗ ಮತ್ತು 1983ರ ವಿಶ್ವಕಪ್ ವಿಜೇತ ತಂಡದ ಸದಸ್ಯ ರೋಜರ್ ಬಿನ್ನಿ ಬಿಸಿಸಿಐನ ಮುಂದಿನ ಅಧ್ಯಕ್ಷರಾಗುವ ಸಾಧ್ಯತೆಯಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

- Advertisement -

ಬಿನ್ನಿ ಈ ಹಿಂದೆ ಬಿಸಿಸಿಐ ಆಯ್ಕೆ ಸಮಿತಿಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಗಂಗೂಲಿ ಬದಲಿಗೆ ಬಿಸಿಸಿಐ ಅಧ್ಯಕ್ಷರಾಗಿ ಮಾಜಿ ವೇಗಿ ರೋಜರ್ ಬಿನ್ನಿ ಮುಂಚೂಣಿಯಲ್ಲಿದ್ದು, ಜಯ್ ಶಾ ಬಿಸಿಸಿಐ ಕಾರ್ಯದರ್ಶಿಯಾಗಿ ಮುಂದುವರಿಯುವ ನಿರೀಕ್ಷೆಯಿದೆ.

ಬಿಸಿಸಿಐನ ಮುಂದಿನ ಅಧ್ಯಕ್ಷರಾಗಿ ಸೌರವ್ ಗಂಗೂಲಿ ಬದಲಿಗೆ ಭಾರತದ ಮಾಜಿ ಕ್ರಿಕೆಟಿಗ ರೋಜರ್ ಬಿನ್ನಿ ಕಣಕ್ಕಿಳಿಯಲಿದ್ದು, ಶೀಘ್ರದಲ್ಲೇ ಅಧಿಕೃತ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

- Advertisement -

ಅಕ್ಟೋಬರ್ 18ರಂದು ನಡೆಯಲಿರುವ ಚುನಾವಣೆಗೆ ಬಿಸಿಸಿಐನ ಕರಡು ಮತದಾರರ ಪಟ್ಟಿಯಲ್ಲಿ ರೋಜರ್ ಬಿನ್ನಿ ಅವರ ಹೆಸರು ಗುರುವಾರ ಕೆಎಸ್ಸಿಎ ಕಾರ್ಯದರ್ಶಿ ಸಂತೋಷ್ ಮೆನನ್ ಬದಲಿಗೆ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ (ಕೆಎಸ್ಸಿಎ) ಪ್ರತಿನಿಧಿಯಾಗಿ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಕಾಣಿಸಿಕೊಂಡಿತು. ಇವೆಲ್ಲವೂ ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ಮಾಜಿ ವೇಗಿ ಮುಂಚೂಣಿಯಲ್ಲಿದ್ದಾರೆ ಎಂಬ ಊಹಾಪೋಹಗಳಿಗೆ ಕಾರಣವಾಗಿದೆ ಎಂದು ತಿಳಿದು ಬಂದಿದೆ.

Join Whatsapp