ಮೈಸೂರಿನಲ್ಲಿ ಕೋವಿಡ್ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಅಗತ್ಯ: ರೋಹಿಣಿ ಸಿಂಧೂರಿ

Prasthutha|

ಮೈಸೂರು: ಕೋವಿಡ್ ನಿಂದಾಗಿ ಸಾವಿನ ಸಂಖ್ಯೆ ಹೆಚ್ಚಾಗ್ತಿದೆ, ರಾಜ್ಯದ ಇತರ ಜಿಲ್ಲೆಗೆ ಹೋಲಿಸಿದರೆ ಮೈಸೂರು ಜಿಲ್ಲೆಯಲ್ಲಿ ಕೋವಿಡ್ ಸಾವಿನ ಪ್ರಮಾಣ ಹೆಚ್ಚಾಗಿದ್ದು, ಇದ್ದನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಜಾರಿಗೆ ತರಲೇಬೇಕಾಗಿದೆ ಎಂದು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು, ನಿತ್ಯ 6 ಸಾವಿರ ಕೊರೋನಾ ಪರೀಕ್ಷೆಗಳನ್ನು ಮಾಡಲಾಗುತ್ತಿದ್ದು, ಸಾರ್ವಜನಿಕ ಲಸಿಕೆ ಪಡೆಯಲು ಮುಂದಾಗಬೇಕು. ಕಡ್ಡಾಯವಾಗಿ ಮಾಸ್ಕ್ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಸಾಧ್ಯವಾದಷ್ಟು ಗುಂಪು ಸೇರುವ ಸ್ಥಳಗಳಿಂದ ದೂರವಿರಬೇಕು. ಗಡಿಭಾಗಳಲ್ಲಿ ಕೋವಿಡ್ ಪರೀಕ್ಷಾ ವರದಿ ತಂದರೆ ಮಾತ್ರ ಜಿಲ್ಲೆಯ ಒಳಗಡೆ ಬಿಡಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

- Advertisement -

ಗ್ರಾಮೀಣ ಭಾಗದಲ್ಲಿ ಲಸಿಕೆ ಹಾಕಿಸಿಕೊಳ್ಳಲು ಹೆಚ್ಚಿನ ಜನ ಮುಂದೆ ಬರುತ್ತಿದ್ದು, ಈಗ ಜಿಲ್ಲೆಯಲ್ಲಿ ಲಸಿಕೆ ಕೊರತೆ ಇಲ್ಲ. ಸದ್ಯ ಜಿಲ್ಲೆಯ ಪ್ರವಾಸಿತಾಣಗಳನ್ನು ಬಂದ್ ಮಾಡುವ ಬಗ್ಗೆ ಮುಖ್ಯಮಂತ್ರಿಗಳಿಂದ ಯಾವುದೇ ಸೂಚನೆ ಬಂದಿಲ್ಲ. ಆದರೆ ಪ್ರವಾಸಿತಾಣಗಳಲ್ಲಿ ಸೋಂಕು ಹರಡದಂತೆ ಮುಂಜಾಗೃತ ಕ್ರಮ ಕೈಗೊಳ್ಳುವಂತೆ ಆದೇಶಿಸಲಾಗಿದೆ ಎಂದಿದ್ದಾರೆ.

- Advertisement -