ಬೆಂಗಳೂರು: ದ್ವಿತೀಯ ಪಿಯುಸಿ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯಿಂದ ರೋಹಿತ್ ಚಕ್ರತೀರ್ಥರನ್ನು ಕೈಬಿಡಲು ನಿರ್ಧರಿಸಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.
ಈ ಬಗ್ಗೆ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿರುವ ಅವರು, ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿಯನ್ನು ವಿಸರ್ಜಿಸಿರುವ ಕಾರಣ, ಪಿಯುಸಿ ಪಠ್ಯಪುಸ್ತಕ ಪರಿಷ್ಕರಣೆಯ ವರದಿಯನ್ನು ಪಡೆಯುವುದಿಲ್ಲ ಎಂದು ಹೇಳಿದ್ದಾರೆ.
ದ್ವಿತೀಯ ಪಿಯುಸಿಯಲ್ಲಿ ಅಧ್ಯಾಯ 4.2ರ ಹೊಸ ಧರ್ಮಗಳ ಉದಯ ಪಠ್ಯಭಾಗದ ಪರಿಷ್ಕರಣೆ ಈ ಮೊದಲು ಸರ್ಕಾರ ಮುಂದಾಗಿತ್ತು. ಪಠ್ಯ ಪರಿಷ್ಕರಣೆ ಜವಾಬ್ದಾರಿಯನ್ನು ರೋಹಿತ್ ಚಕ್ರತೀರ್ಥ ಅವರಿಗೆ ವಹಿಸಲಾಗಿತ್ತು. ಶಾಲೆಗಳ ಪಠ್ಯದ ಪರಿಷ್ಕರಣೆ ವಿವಾದ ಹಿನ್ನಲೆಯಲ್ಲಿ ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿಯನ್ನು ಕೈಬಿಡಲು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮುಂದಾಗಿದ್ದಾರೆ.
ಪ್ರಾಥಮಿಕ ಪಠ್ಯ ಪರಿಷ್ಕರಣೆಗೆ ರೋಹಿತ್ ಚಕ್ರತೀರ್ಥ ಅವರನ್ನು ಈ ಮೊದಲು ಸರ್ಕಾರವು ನೇಮಿಸಿತ್ತು. ಆದರೆ ಸಾಲುಸಾಲು ವಿವಾದಗಳು ಎದುರಾಗಿತ್ತು. ಈ ಮಧ್ಯೆ ಪಿಯುಸಿ ಪಠ್ಯ ಪರಿಷ್ಕರಣೆಗೂ ರೋಹಿತ್ ಚಕ್ರತೀರ್ಥರಿಗೇ ಜವಾಬ್ದಾರಿ ನೀಡಲಾಗಿತ್ತು.
ಪಿಯುಸಿ ಪಠ್ಯ ಪರಿಷ್ಕರಣೆ ಸಮಿತಿಯಿಂದ ರೋಹಿತ್ ಚಕ್ರತೀರ್ಥ ಕಿಕ್ ಔಟ್
Prasthutha|