ಬೆಂಗಳೂರು: ರಾಜ್ಯದಲ್ಲಿ ಪಠ್ಯಪುಸಕ್ತ ಪರಿಷ್ಕರಣಾ ಸಮಿತಿಯ ಮಾಜಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಶೀಲನಾ ಸಮಿತಿಯಿಂದ ಮತ್ತೊಂದು ಎಡವಟ್ಟು ನಡೆದಿದೆ. 3 ಮತ್ತು 4ನೇ ತರಗತಿ ಪುಸ್ತಕಗಳಲ್ಲಿ ಒಂದೇ ಪದ್ಯವನ್ನು ಸೇರ್ಪಡೆಗೊಳಿಸಿದ್ದಾರೆ.
ಬಿ.ಎಂ. ಶರ್ಮಾರವರು ‘ಬಾವಿಯಲ್ಲಿ ಚಂದ್ರ’ ಎಂಬ ಪದ್ಯವನ್ನು ಎರಡು ತರಗತಿಗಳಲ್ಲಿ ಸೇರಿಸಿ ಸಮಿತಿ ಎಡವಟ್ಟು ಮಾಡಿದೆ. ಬಾವಿಯಲ್ಲಿ ಚಂದ್ರ ಶೀರ್ಷಿಕೆಯ ಪದ್ಯವನ್ನು ಹಿಂದಿನ ಸಮಿತಿಯು 3ನೇ ತರಗತಿ ನಲಿ-ಕಲಿ ಕನ್ನಡ ಪಠ್ಯದಲ್ಲಿ ಸೇರಿಸಿತ್ತು. ರೋಹಿತ್ ಚಕ್ರತೀರ್ಥ ಸಮಿತಿಯು 3ನೇ ತರಗತಿಯ ನಲಿಕಲಿ ಕನ್ನಡ ಪಠ್ಯದಲ್ಲಿ ಮುಂದುವರೆಸಿದೆ. ಅಲ್ಲದೆ 4ನೇ ತರಗತಿಯ ಸವಿ ಕನ್ನಡ ಪುಸ್ತಕದಲ್ಲಿಯೂ ಇದೇ ಪದ್ಯ ಸೇರಿಸಲಾಗಿದೆ. ಪಾಠ ಮಾಡುವ ಶಿಕ್ಷಕರಿಗೂ ಗೊಂದಲ ಉಂಟಾಗಿದೆ.
ಮುಗಿಯದ ರೋಹಿತ್ ಚಕ್ರತೀರ್ಥನ ಎಡವಟ್ಟು: 3, 4ನೇ ತರಗತಿ ಪುಸ್ತಕಗಳಲ್ಲಿದೆ ಒಂದೇ ಪದ್ಯ
Prasthutha|