ಬೆಂಗಳೂರು: ರಾಜ್ಯದಲ್ಲಿ ಪಠ್ಯಪುಸಕ್ತ ಪರಿಷ್ಕರಣಾ ಸಮಿತಿಯ ಮಾಜಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಶೀಲನಾ ಸಮಿತಿಯಿಂದ ಮತ್ತೊಂದು ಎಡವಟ್ಟು ನಡೆದಿದೆ. 3 ಮತ್ತು 4ನೇ ತರಗತಿ ಪುಸ್ತಕಗಳಲ್ಲಿ ಒಂದೇ ಪದ್ಯವನ್ನು ಸೇರ್ಪಡೆಗೊಳಿಸಿದ್ದಾರೆ.
ಬಿ.ಎಂ. ಶರ್ಮಾರವರು ‘ಬಾವಿಯಲ್ಲಿ ಚಂದ್ರ’ ಎಂಬ ಪದ್ಯವನ್ನು ಎರಡು ತರಗತಿಗಳಲ್ಲಿ ಸೇರಿಸಿ ಸಮಿತಿ ಎಡವಟ್ಟು ಮಾಡಿದೆ. ಬಾವಿಯಲ್ಲಿ ಚಂದ್ರ ಶೀರ್ಷಿಕೆಯ ಪದ್ಯವನ್ನು ಹಿಂದಿನ ಸಮಿತಿಯು 3ನೇ ತರಗತಿ ನಲಿ-ಕಲಿ ಕನ್ನಡ ಪಠ್ಯದಲ್ಲಿ ಸೇರಿಸಿತ್ತು. ರೋಹಿತ್ ಚಕ್ರತೀರ್ಥ ಸಮಿತಿಯು 3ನೇ ತರಗತಿಯ ನಲಿಕಲಿ ಕನ್ನಡ ಪಠ್ಯದಲ್ಲಿ ಮುಂದುವರೆಸಿದೆ. ಅಲ್ಲದೆ 4ನೇ ತರಗತಿಯ ಸವಿ ಕನ್ನಡ ಪುಸ್ತಕದಲ್ಲಿಯೂ ಇದೇ ಪದ್ಯ ಸೇರಿಸಲಾಗಿದೆ. ಪಾಠ ಮಾಡುವ ಶಿಕ್ಷಕರಿಗೂ ಗೊಂದಲ ಉಂಟಾಗಿದೆ.