ಏಷ್ಯಾ ಕಪ್‌| ಹಾರ್ದಿಕ್‌ ಪಾಂಡ್ಯಗೆ ವಿಶ್ರಾಂತಿ, ತಂಡಕ್ಕೆ ಮರಳಿದ ರಿಷಭ್‌ ಪಂತ್

Prasthutha|

ದುಬೈ: ಏಷ್ಯಾ ಕಪ್‌ ಟೂರ್ನಿಯ ನಾಲ್ಕನೇ ಪಂದ್ಯದಲ್ಲಿ ಟೀಮ್‌ ಇಂಡಿಯಾ – ಹಾಂಕಾಂಗ್‌ ತಂಡಗಳು ಮುಖಾಮುಖಿಯಾಗುತ್ತಿದೆ. ಟಾಸ್‌ ಗೆದ್ದ ಹಾಂಕಾಂಗ್‌ ತಂಡ, ರೋಹಿತ್‌ ಶರ್ಮಾ ಬಳಗವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿದೆ.

- Advertisement -

ಟೂರ್ನಿಯ ಮೊದಲ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಟೀಮ್‌ ಇಂಡಿಯಾ ರೋಚಕ ಗೆಲುವು ಸಾಧಿಸಿತ್ತು. ಹೀಗಾಗಿ ಹಾಂಕಾಂಗ್‌ ವಿರುದ್ಧ ಇದೇ ತಂಡವನ್ನು ಉಳಿಸಿಕೊಳ್ಳಲಿದೆ ಎನ್ನಲಾಗಿತ್ತು. ಆದರೆ ಅಚ್ಚರಿ ಎಂಬಂತೆ ವಿಕೆಟ್‌ ಕೀಪರ್‌ ರಿಷಭ್‌ ಪಂತ್‌ ತಂಡಕ್ಕೆ ಮರಳಿದ್ದು, ಮೊದಲ ಪಂದ್ಯದಲ್ಲಿ ಭಾರತ ತಂಡವನ್ನು ಗೆಲುವಿನ ದಡ ತಲುಪಿಸಿದ್ದ ಆಲ್‌ರೌಂಡರ್‌ ಹಾರ್ದಿಕ್‌ ಪಾಂಡ್ಯಾಗೆ ವಿಶ್ರಾಂತಿ ನೀಡಲಾಗಿದೆ. ಉಳಿದಂತೆ ಟೀಮ್‌ ಇಂಡಿಯಾದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ.

ದಿನೇಶ್‌ ಕಾರ್ತಿಕ್‌ ಅವರನ್ನು ಉಳಿಸಿಕೊಂಡು ರಿಷಭ್‌ ಅವರಿಗೂ ಸ್ಥಾನ ನೀಡಲಾಗಿದೆ. ಹೀಗಾಗಿ ಭಾರತ ತಂಡದಲ್ಲಿ ಎರಡು ವಿಕೆಟ್‌ ಕೀಪರ್‌ಗಳನ್ನು ಹೊಂದಿದಂತಾಗಿದೆ. ದಕ್ಷಿಣ ಆಫ್ರಿಕಾ ಪ್ರವಾಸದಲಲಿ ಟೀಮ್‌ ಇಂಡಿಯಾವನ್ನು ಮುನ್ನಡೆಸಿದ್ದ ರಿಷಭ್‌ ಪಂತ್‌ ರನ್ನು, ಪಾಕಿಸ್ತಾನ ವಿರುದ್ಧದ ಮೊದಲ ಪಂದ್ಯದಿಂದ ಕೈ ಬಿಡಲಾಗಿತ್ತು. ಹೀಗಾಗಿ ಟೀಮ್‌ ಇಂಡಿಯಾದಲ್ಲಿ ರವೀಂದ್ರ ಜಡೇಜಾ ಏಕೈಕ ಎಡಗೈ ಬ್ಯಾಟ್ಸ್‌ಮನ್‌ ಆಗಿ ಉಳಿದಿದ್ದರು.

- Advertisement -

ಪಾಂಡ್ಯಾಗೆ ವಿಶ್ರಾಂತಿ ನೀಡಿರುವ ಹಿನ್ನಲೆಯಲ್ಲಿ ಹಾಂಕಾಂಗ್‌ ವಿರುದ್ಧ ಟೀಮ್‌ ಇಂಡಿಯಾ ಐವರು ಬೌಲರ್‌ಗಳೊಂದಿಗೆ ಕಣಕ್ಕಿಳಿಯಲಿದೆ.

ಪ್ಲೇಯಿಂಗ್‌ ಎಲೆವೆನ್‌

ಭಾರತ: ರೋಹಿತ್‌ ಶರ್ಮಾ (ನಾಯಕ), ಕೆ.ಎಲ್‌ ರಾಹುಲ್‌, ವಿರಾಟ್‌ ಕೊಹ್ಲಿ, ಸೂರ್ಯಕುಮಾರ್‌ ಯಾದವ್‌, ದೀಪಕ್‌ ಹೂಡ, ರಿಷಭ್ ಪಂತ್‌ (ವಿಕೆಟ್‌ಕೀಪರ್‌), ದಿನೇಶ್‌ ಕಾರ್ತಿಕ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಭುವನೇಶ್ವರ್‌ ಕುಮಾರ್‌, ಅರ್ಷದೀಪ್‌ ಸಿಂಗ್‌, ಅವೇಶ್‌ ಖಾನ್‌, ಯಜುವೇಂದ್ರ ಚಾಹಲ್‌,

ಹಾಂಕಾಂಗ್

ನಿಝಾಕತ್ ಖಾನ್ (ನಾಯಕ), ಬಾಬರ್ ಹಯಾತ್,  ಯಾಸ್ಮಿನ್ ಮುರ್ತಾಜಾ,  ಕಿಂಚಿತ್ ಶಾ,  ಸ್ಕಾಟ್ ಮೆಕೆಚ್ನಿ (ವಿಕೆಟ್‌ ಕೀಪರ್),  ಹಾರೂನ್ ಅರ್ಷದ್,  ಐಝಾಝ್ ಖಾನ್,‌  ಜೀಶನ್ ಅಲಿ,  ಎಹ್ಸಾನ್ ಖಾನ್, ಆಯುಷ್ ಶುಕ್ಲಾ, ಮುಹಮ್ಮದ್ ಘಝ್ನಾಫರ್

Join Whatsapp