ಕೊಹ್ಲಿ ಕೈತಪ್ಪಿದ ಕ್ಯಾಪ್ಟನ್ ಪಟ್ಟ: ಏಕದಿನ ತಂಡಕ್ಕೆ ರೋಹಿತ್ ಶರ್ಮಾ ನಾಯಕ

Prasthutha|

ನವದೆಹಲಿ: ಟೀಮ್ ಇಂಡಿಯಾದ ಟಿ-20 ನಾಯಕನ ಸ್ಥಾನ ಕಳೆದುಕೊಂಡ ಬೆನ್ನಲ್ಲೇ ವಿರಾಟ್ ಕೊಹ್ಲಿಗೆ ಮತ್ತೊಂದು ಶಾಕ್ ಕೊಟ್ಟಿರುವ BCCI, ಏಕದಿನ ತಂಡಕ್ಕೆ ರೋಹಿತ್ ಶರ್ಮಾರನ್ನು ನಾಯಕರನ್ನಾಗಿ ನೇಮಕ ಮಾಡಿದೆ. ಈ ಕುರಿತು ಟ್ವೀಟ್ ಮಾಡಿರುವ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ-BCCI, ‘ರಾಷ್ಟ್ರೀಯ ಆಯ್ಕೆ ಸಮಿತಿಯು ರೋಹಿತ್ ಶರ್ಮಾರನ್ನು ಟಿ-20 ಮತ್ತು ಏಕದಿನ ತಂಡಗಳಿಗೆ ನಾಯಕರನ್ನಾಗಿ ನೇಮಕ ಮಾಡಲು ನಿರ್ಧರಿಸಿದೆ’ ಎಂದು ತಿಳಿಸಿದೆ.

- Advertisement -

ಮೂರು ಟೆಸ್ಟ್ ಹಾಗೂ ಮೂರು ಏಕದಿನ ಪಂದ್ಯಗಳ ಸರಣಿಯನ್ನಾಡಲು ಸದ್ಯದಲ್ಲೇ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾಗೆ ಪ್ರಯಾಣ ಬೆಳಸಲಿದೆ. ಏಕದಿನ ಸರಣಿಯು ಪೂರ್ಣ ಪ್ರಮಾಣದ ನಾಯಕನಾಗಿ ರೋಹಿತ್’ಗೆ ಮೊದಲ ಸವಾಲಿನ ಸರಣಿಯಾಗಲಿದೆ. ಇದಕ್ಕೂ ಮೊದಲು ಟೆಸ್ಟ್ ಸರಣಿ ನಡೆಯಲಿದ್ದು, ಡಿಸೆಂಬರ್ 17ರಿಂದ ಮೊದಲ ಟೆಸ್ಟ್ ಜೊಹನೆಸ್’ಬರ್ಗ್’ನಲ್ಲಿ ಆರಂಭವಾಗಲಿದೆ. ಟೆಸ್ಟ್ ತಂಡದ ನಾಯಕರಾಗಿ ವಿರಾಟ್ ಕೊಹ್ಲಿ ಮುಂದುವರಿಯಲಿದ್ದಾರೆ.

ಯುಎಇಯಲ್ಲಿ ನಡೆದಿದ್ದ ಟಿ-20 ವಿಶ್ವಕಪ್ ಟೂರ್ನಿಯ ಬಳಿಕ ವಿರಾಟ್ ಕೊಹ್ಲಿ, ಟೀಮ್ ಇಂಡಿಯಾದ  ಟಿ-20 ತಂಡದ ನಾಯಕತ್ವ ತ್ಯಜಿಸಿದ್ದರು. ಇದರ ಬೆನ್ನಲ್ಲೇ ಏಕದಿನ ನಾಯಕ ಸ್ಥಾನದಿಂದಲೂ ಕೊಹ್ಲಿಯನ್ನು ಕೈಬಿಡುವ ಬಗ್ಗೆ ಮಾತುಗಳು ಕೇಳಿ ಬಂದಿತ್ತು. ಇದೀಗ ಆಯ್ಕೆ ಸಮಿತಿಯು ವಿರಾಟ್ ಜೊತೆಗೆ ಚರ್ಚೆ ನಡೆಸಿದ ಬಳಿಕ ನಾಯಕತ್ವ ಬದಲಾಯಿಸುವ ತೀರ್ಮಾನ ಕೈಗೊಂಡಿದೆ ಎಂದು ಮೂಲಗಳು ತಿಳಿಸಿವೆ.

Join Whatsapp