ಟಿ-20 ವಿಶ್ವಕಪ್​ಗೆ ರೋಹಿತ್ ಶರ್ಮಾ ಟೀಂ ಇಂಡಿಯಾ ನಾಯಕ: ಜಯ್​ ಷಾ

Prasthutha|

ನವದೆಹಲಿ: ಜೂನ್​ ತಿಂಗಳಲ್ಲಿ ವೆಸ್ಟ್​ ಇಂಡೀಸ್​ ಹಾಗೂ ಯುಎಸ್​ಎ ಆತಿಥ್ಯದಲ್ಲಿ ನಡೆಯಲಿರುವ ಟಿ-20 ವಿಶ್ವಕಪ್​‌ಗೆ ಟೀಂ ಇಂಡಿಯಾದ ನಾಯಕ ರೋಹಿತ್​ ಶರ್ಮಾ ಆಗಿರಲಿದ್ದಾರೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್​ ಷಾ ತಿಳಿಸಿದ್ದಾರೆ. ಬಿಸಿಸಿಐ ಈ ಬಗ್ಗೆ ಅಧಿಕೃತವಾಗಿ ಪ್ರಕಟಿಸಿಲ್ಲ.

- Advertisement -

ರಾಜ್​ಕೋಟ್​ನಲ್ಲಿರುವ ಸೌರಾಷ್ಟ್ರ ಕ್ರಿಕೆಟ್​ ಸ್ಟೇಡಿಯಂ ಮರುನಾಮಕರಣ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ರೋಹಿತ್​ ಶರ್ಮಾ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ಹೇಳಿದ್ದಾರೆ.

ನಾವು 2023ರ ODI ವಿಶ್ವಕಪ್‌ನ ಫೈನಲ್‌ನಲ್ಲಿ ಸೋತಿದ್ದೇವೆ ನಿಜ. ಆದರೆ ನಾವು ಸತತ 10 ಪಂದ್ಯಗಳನ್ನು ಗೆದ್ದಿದ್ದೇವೆ. ಈ ಮೂಲಕ ಜನರ ಹೃದಯ ಗೆದ್ದಿದ್ದೇವೆ. ರೋಹಿತ್ ಶರ್ಮಾ ಅವರ ನಾಯಕತ್ವದಲ್ಲಿ ಭಾರತವು 2024 ರ ಟಿ 20 ವಿಶ್ವಕಪ್ ಗೆಲ್ಲಲಿದೆ ಎನ್ನುವ ವಿಶ್ವಾಸವಿದೆ ಎಂದು ಜಯ್ ಷಾ ಹೇಳಿದ್ದಾರೆ. ಈ ಮೂಲಕ ಟೀಂ ಇಂಡಿಯಾದ ನಾಯಕತ್ವ ಸಂಬಂಧವಾಗಿ ಎದ್ದಿರುವ ವದಂತಿಗಳಿಗೆ ತೆರೆ ಎಳೆಯುವ ಕೆಲಸ ಮಾಡಿದ್ದಾರೆ.

Join Whatsapp