ಭಾರತ-ಪಾಕಿಸ್ತಾನ ಟಿ20 ಪಂದ್ಯ | ಟಾಸ್ ಗೆದ್ದ ಭಾರತ, ಪಂತ್ ಬದಲು ದಿನೇಶ್ ಕಾರ್ತಿಕ್‌ಗೆ ಸ್ಥಾನ

Prasthutha|

ದುಬೈ: ಏಷ್ಯಾ ಕಪ್‌ ಟಿ20 ಟೂರ್ನಿಯ ಮಹತ್ತರ ಪಂದ್ಯದಲ್ಲಿ ಭಾರತ-ಪಾಕಿಸ್ತಾನ ತಂಡಗಳು ಮುಖಾಮುಖಿಯಾಗುತ್ತಿವೆ. ದುಬೈನ ಅಂತಾರಾಷ್ಟ್ರೀಯ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಭಾರತದ ನಾಯಕ ರೋಹಿತ್‌ ಶರ್ಮಾ ಟಾಸ್‌ ಗೆದ್ದು ಫೀಲ್ಡಿಂಗ್‌ ಆಯ್ದುಕೊಂಡಿದ್ದಾರೆ.

- Advertisement -

ಟೀಮ್‌ ಇಂಡಿಯಾದಲ್ಲಿ ಅಚ್ಚರಿ ಎಂಬಂತೆ ವಿಕೆಟ್‌ ಕೀಪರ್‌ ರಿಷಭ್‌ ಪಂತ್‌ರನ್ನು ಕೈಬಿಡಲಾಗಿದ್ದು, ಪಂತ್‌ ಬದಲಿಗೆ ಅನುಭವಿ ದಿನೇಶ್‌ ಕಾರ್ತಿಕ್‌ಗೆ ಸ್ಥಾನ ಪಡೆದಿದ್ದಾರೆ. ಅತ್ತ ಪಾಕಿಸ್ತಾನ ತಂಡದಲ್ಲೂ ಪ್ರಮುಖ ಬದಲಾವಣೆ ಮಾಡಲಾಗಿದ್ದು, ಶಾನವಾಜ್ ದಹಾನಿ ಬದಲು ನಸೀಮ್ ಶಾಗೆ ಆಡುವ ಹನ್ನೊಂದರ ಬಳಗದಲ್ಲಿ ಅವಕಾಶ ನೀಡಲಾಗಿದೆ. ಈ ಮೂಲಕ ನಸೀಮ್ ಶಾ, ಚೊಚ್ಚಲ ಅಂತಾರಾಷ್ಟ್ರೀಯ ಟಿ20 ಪಂದ್ಯವನ್ನಾಡಲಿದ್ದಾರೆ.

ಉಭಯ ತಂಡಗಳ ಪ್ಲೇಯಿಂಗ್‌ ಇಲೆವೆನ್‌

- Advertisement -

ಭಾರತ: ರೋಹಿತ್ ಶರ್ಮಾ(ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದಿನೇಶ್ ಕಾರ್ತಿಕ್ (ವಿಕೆಟ್‌ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಭುವನೇಶ್ವರ್ ಕುಮಾರ್, ಅವೇಶ್ ಖಾನ್, ಯಜುವೇಂದ್ರ ಚಾಹಲ್, ಅರ್ಷದೀಪ್ ಸಿಂಗ್.‌

ಪಾಕಿಸ್ತಾನ: ಬಾಬರ್ ಅಜಮ್(ನಾಯಕ), ಮುಹಮ್ಮದ್ ರಿಝ್ವಾನ್(ವಿಕೆಟ್‌ ಕೀಪರ್‌), ಫಖರ್ ಝಮಾನ್, ಇಫ್ತಿಕರ್ ಅಹ್ಮದ್, ಖುಷ್ದಿಲ್ ಶಾ, ಆಸಿಫ್ ಅಲಿ, ಶಾದಾಬ್ ಖಾನ್, ಮುಹಮ್ಮದ್ ನವಾಝ್‌, ನಸೀಮ್ ಶಾ, ಹಾರಿಸ್ ರೌಫ್, ಶಾನವಾಝ್ ದಹಾನಿ

Join Whatsapp