ಮಂಗಳೂರು: ರೋಹಿತ್ ಚಕ್ರತೀರ್ಥ ಸನ್ಮಾನ ಕಾರ್ಯಕ್ರಮ ರದ್ದು

Prasthutha|

ಮಂಗಳೂರು: ಶಾಸಕ ವೇದವ್ಯಾಸ ಕಾಮತ್ ಅಧ್ಯಕ್ಷತೆಯ ಸೇವಾಂಜಲಿ ಟ್ರಸ್ಟ್ ಸಹಯೋಗದಲ್ಲಿ ನಾಡ ಗೀತೆ ಸೇರಿದಂತೆ ನಾಡಿನ ಮಹನೀಯರನ್ನು ಅವಮಾನಿಸಿದ್ದ ರೋಹಿತ್ ಚಕ್ರತೀರ್ಥನಿಗೆ ಜೂನ್ 25 ರಂದು ನಡೆಯಬೇಕಿದ್ದ ನಾಗರಿಕ ಸನ್ಮಾನವನ್ನು ರದ್ದುಗೊಳಿಸಲಾಗಿದೆ.

- Advertisement -

ಸನ್ಮಾನ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರು ವಿವಿ ಕುಲಪತಿ ಯಡಪಡಿತ್ತಾಯ ವಹಿಸಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ಉಂಟಾಗಿತ್ತು.

- Advertisement -

ರೋಹಿತ್ ಚಕ್ರತೀರ್ಥ ಅವರಿಗೆ ನಾಗರಿಕ ಸನ್ಮಾನ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಮುತ್ತಿಗೆ ಹಾಕಿ, ಗಲಾಟೆ, ದೊಂಬಿ ನಡೆಸಿ ನಗರದ ಶಾಂತಿ, ಸುವ್ಯವಸ್ಥೆ ಹಾಳು ಮಾಡುವ ಸಾಧ್ಯತೆ ಇದೆ ಎಂದು ಮಾಹಿತಿ ಬಂದ ಹಿನ್ನಲೆಯಲ್ಲಿ ಜೂನ್ 25 ರ ನಾಗರಿಕ ಸನ್ಮಾನ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ.

Join Whatsapp