Home ಟಾಪ್ ಸುದ್ದಿಗಳು ಮನೆ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ಮೃತ್ಯು

ಮನೆ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ಮೃತ್ಯು

ಲಖನೌ: ಉತ್ತರ ಭಾರತದಲ್ಲಿ ಭಾರಿ ಮಳೆಯಾಗುತ್ತಿದ್ದು, ವಿವಿಧ ರಾಜ್ಯಗಳಲ್ಲಿ ಶಿಥಿಲಗೊಂಡ ಕಟ್ಟಡಗಳು ಧರೆಗೆ ಉರುಳುತ್ತಿವೆ. ಇದೀಗ ಉತ್ತರ ಪ್ರದೇಶದ ಬುಲಂದ್​ಶಹರ್ ಜಿಲ್ಲೆಯ ನರಸೇನಾ ಪೊಲೀಸ್ ಠಾಣಾ ವ್ಯಾಪ್ತಿಯ ಮಾವಾಯಿ ಗ್ರಾಮದಲ್ಲಿ ಮನೆ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ.

ನಿರಂತರ ಮಳೆಯಿಂದ ಶಿಥಿಲಗೊಂಡಿದ್ದ ಮನೆ ಮೇಲ್ಛಾವಣಿ ಕುಸಿದು ದುರಂತ ಸಂಭವಿಸಿದೆ. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ನರಸೇನಾ ಪೊಲೀಸರು ಅವಶೇಷಗಳಡಿ ಸಿಲುಕಿದ್ದ ಶವಗಳನ್ನು ಹೊರತೆಗೆದಿದ್ದಾರೆ.

Join Whatsapp
Exit mobile version