ಬಿಜೆಪಿ ಸೇರಲು ತೀರ್ಮಾನಿಸಿದ ಕಾಂಗ್ರೆಸ್ ಮಾಜಿ ಸಚಿವ ರೋಷನ್ ಬೇಗ್

Prasthutha|

ಬೆಂಗಳೂರು: ಕಾಂಗ್ರೆಸ್ ಮಾಜಿ ಸಚಿವ ಆರ್. ರೋಷನ್ ಬೇಗ್ ಅವರು ವಿಧಾನಸಭಾ ಚುನಾವಣೆಗೂ ಮುನ್ನ ಬಿಜೆಪಿ ಸೇರಲು ತೀರ್ಮಾನಿಸಿದ್ದಾರೆ ಎಂದು ತಿಳಿದುಬಂದಿದೆ.

- Advertisement -


ತಮ್ಮ ಬೆಂಬಲಿಗರ ಜೊತೆ ಬಿಜೆಪಿ ಸೇರಲು ತೀರ್ಮಾನಿಸಿರುವ ರೋಷನ್ ಬೇಗ್ ಮುಂದಿನ ವಾರ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಲಿದ್ದಾರೆ. ಆದರೆ, ಯಾವಾಗ ಬೇಕಾದರೂ ಅವರು ಪಕ್ಷಕ್ಕೆ ಸೇರ್ಪಡೆಯಾಗಬಹುದು ಎಂದು ಮೂಲಗಳು ತಿಳಿಸಿವೆ.


ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಮಾಜಿ ಸಚಿವ ರೋಷನ್ ಬೇಗ್ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲು ವರಿಷ್ಠರು ಕೂಡ ಸಮ್ಮತಿಸಿದ್ದು, ಅವಕಾಶ ನೀಡಿದರೆ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಬಹುದು ಎಂದು ತಿಳಿಸಿದ್ದಾರೆ.

- Advertisement -


ಇತ್ತೀಚೆಗೆ ಬಿಜೆಪಿ ಹಮ್ಮಿಕೊಂಡಿದ್ದ ಮುಸ್ಲಿಮ್ ಮುಖಂಡರ ಸಭೆಯಲ್ಲೂ ರೋಷನ್ ಬೇಗ್ ಕಾಣಿಸಿಕೊಂಡಿದ್ದರು.

Join Whatsapp