ರಾಜರಾಜೇಶ್ವರಿ ನಗರ ಉಪಚುನಾವಣೆ | ಮುನಿರತ್ನಗೆ ಭರ್ಜರಿ ಗೆಲುವು!
Prasthutha: November 10, 2020

ಬೆಂಗಳೂರು : ತೀವ್ರ ಕುತೂಹಲ ಕೆರಳಿಸಿದ್ದ ರಾಜ್ಯದ ರಾಜರಾಜೇಶ್ವರಿ ನಗರ ವಿಧಾನಸಭಾ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಭರ್ಜರಿ ಗೆಲುವು ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ. ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆಯೊಂದೇ ಬಾಕಿಯುಳಿದಿದೆ.
ಬಿಜೆಪಿ ಅಭ್ಯರ್ಥಿ ಮುನಿರತ್ನ 1,25,734 ಮತಗಳನ್ನು ಪಡೆದು ಭಾರೀ ಅಂತರದ ವಿಜಯ ಪತಾಕೆ ಹಾರಿಸಿದ್ದಾರೆ. ಆರಂಭಿಕ ಹಂತದಿಂದಲೂ ಮುನಿರತ್ನ ಎಲ್ಲೂ ಮುನ್ನಡೆ ಬಿಟ್ಟುಕೊಟ್ಟಿರಲಿಲ್ಲ.
ಕಾಂಗ್ರೆಸ್ ಅಭ್ಯರ್ಥಿ ಕುಸುಮಾ 67,798 ಮತಗಳನ್ನು ಪಡೆದುಕೊಂಡು, ಎರಡನೇ ಸ್ಥಾನಕ್ಕೆ ತೃಪ್ತರಾಗಿದ್ದಾರೆ. ಜೆಡಿಎಸ್ ಅಭ್ಯರ್ಥಿ 10,251 ಮತಗಳನ್ನು ಪಡೆದುಕೊಂಡಿದ್ದಾರೆ.
ರಾಜರಾಜೇಶ್ವರಿ ನಗರ ಉಪ ಚುನಾವಣೆಯಲ್ಲಿ ಭಾರೀ ಕುತೂಹಲ ಮೂಡಿಸಿತ್ತು. ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಜಿದ್ದಾಜಿದ್ದಿಯ ಹೋರಾಟದ ಕಣವಾಗಿ ರಾಜರಾಜೇಶ್ವರಿ ಕ್ಷೇತ್ರ ಮಾರ್ಪಟ್ಟಿತ್ತು.
