ಬೆಂಗಳೂರು : ಬಹು ನಿರೀಕ್ಷಿತ ರಾಜರಾಜೇಶ್ವರಿ ನಗರ ಮತ್ತು ತುಮಕೂರು ಜಿಲ್ಲೆಯ ಶಿರಾ ಕ್ಷೇತ್ರದ ಉಪ ಚುನಾವಣೆಯ ಮತದಾನ ಆರಂಭವಾಗಿದೆ. ಕೋವಿಡ್ 19 ಸಂದರ್ಭ ನಡೆಯುತ್ತಿರುವ ಮೊದಲ ಚುನಾವಣೆ ಇದಾಗಿದ್ದು, ಈ ಸಂಬಂಧ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಇಂದು (ಮಂಗಳವಾರ) ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆ ವರೆಗೆ ಮತದಾನಕ್ಕೆ ಅವಕಾಶವಿದೆ. ಕೋವಿಡ್ ಸೋಂಕಿತರು 5ರಿಂದ 6 ಗಂಟೆ ತನಕ ಮತದಾನ ಮಾಡಬಹುದಾಗಿದೆ.
ನ.10ರಂದು ಮತ ಎಣಿಕೆ ನಡೆಯಲಿದೆ. 2018ರ ಚುನಾವಣೆಯಲ್ಲಿ ರಾಜರಾಜೇಶ್ವರಿ ನಗರದಲ್ಲಿ ಕಾಂಗ್ರೆಸ್, ಶಿರಾದಲ್ಲಿ ಜೆಡಿಎಸ್ ಅಭ್ಯರ್ಥಿಗಳು ಗೆದ್ದಿದ್ದರು. ಪ್ರಸ್ತುತ ರಾಜರಾಜೇಶ್ವರಿ ನಗರದಲ್ಲಿ 16 ಮತ್ತು ಶಿರಾದಲ್ಲಿ 15 ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಬಿಹಾರಾದಲ್ಲಿ ಎರಡನೇ ಹಂತದ ಚುನಾವಣೆ : ಬಿಹಾರದಲ್ಲಿ ಎರಡನೇ ಹಂತದ ಮತದಾನ ಇಂದು ಬೆಳಗ್ಗೆಯಿಂದಲೇ ಆರಂಭವಾಗಿದ್ದು, ಮತದಾನ ಬಿರುಸಿನಿಂದ ಸಾಗಿದೆ. 243 ಸದಸ್ಯ ಬಲದ ಬಿಹಾರ ವಿಧಾನಸಭೆಯ 94 ವಿಧಾನಸಭಾ ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದೆ. ಮೂರು ಹಂತದ ಚುನಾವಣೆ ಬಿಹಾರದಲ್ಲಿ ನಡೆಯುತ್ತಿದ್ದು, ಕೋವಿಡ್ 19 ಸಂಕಷ್ಟದ ನಡುವೆ ನಡೆಯುತ್ತಿರುವ ಚುನಾವಣೆ ಇದಾಗಿದೆ.