Budget 2024 LIVE | ಕೃಷಿ ಕ್ಷೇತ್ರಕ್ಕೆ 1.5 ಲಕ್ಷ ಕೋಟಿ ರೂ. ಹಂಚಿಕೆ: ನಿರ್ಮಲಾ

Prasthutha|

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ ಬೆಳಿಗ್ಗೆ 11 ಗಂಟೆಯಿಂದ ಬಜೆಟ್ ಮಂಡಿಸುತ್ತಿದ್ದಾರೆ.

- Advertisement -


ರೈತರು ಮತ್ತು ಕೃಷಿ ಕ್ಷೇತ್ರಕ್ಕೆ ಬಜೆಟ್ ನಲ್ಲಿ 1.52 ಲಕ್ಷ ಕೋಟಿ ರೂ. ಘೋಷಣೆ ಮಾಡಲಾಗಿದೆ. ಈ ನಿಧಿಯಿಂದ ಕೃಷಿ ಮತ್ತು ಸಂಬಂಧಿತ ಕ್ಷೇತ್ರಗಳಿಗೆ ಯೋಜನೆಗಳನ್ನು ರೂಪಿಸಲಾಗುವುದು ಎಂದು ನಿರ್ಮಲಾ ತಿಳಿಸಿದ್ದಾರೆ.

ಮಧ್ಯಂತರ ಬಜೆಟ್ನಲ್ಲಿ ಉಲ್ಲೇಖಿಸಿರುವಂತೆ ನಾವು ಬಡವರು, ಮಹಿಳೆಯರು, ಯುವಕರು ಮತ್ತು ರೈತರ ಮೇಲೆ ಗಮನ ಕೇಂದ್ರೀಕರಿಸಿದ್ದೇವೆ ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ರೈತರಿಗೆ, ನಾವು ಎಲ್ಲಾ ಪ್ರಮುಖ ಬೆಳೆಗಳಿಗೆ ಹೆಚ್ಚಿನ ಕನಿಷ್ಠ ಬೆಂಬಲ ಬೆಲೆಯನ್ನು ಘೋಷಿಸಿದ್ದೇವೆ, ಭರವಸೆಯನ್ನು ಈಡೇರಿಸಿದ್ದೇವೆ. ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯು 5 ವರ್ಷಗಳವರೆಗೆ ಕನಿಷ್ಠ 50% ಮಾರ್ಜಿನ್ ವೆಚ್ಚದಲ್ಲಿ 80 ಕೋಟಿ ಜನರಿಗೆ ಪ್ರಯೋಜನವನ್ನು ನೀಡುತ್ತದೆ.

- Advertisement -

ರೈತರು ಮತ್ತು ಕೃಷಿ ಕ್ಷೇತ್ರಕ್ಕೆ ಬಜೆಟ್ ನಲ್ಲಿ 1.52 ಲಕ್ಷ ಕೋಟಿ ರೂ. ಘೋಷಣೆ ಮಾಡಲಾಗಿದೆ. ಈ ನಿಧಿಯಿಂದ ಕೃಷಿ ಮತ್ತು ಸಂಬಂಧಿತ ಕ್ಷೇತ್ರಗಳಿಗೆ ಯೋಜನೆಗಳನ್ನು ರೂಪಿಸಲಾಗುವುದು ಎಂದು ನಿರ್ಮಲಾ ತಿಳಿಸಿದ್ದಾರೆ.


ಮುಂದಿನ ಒಂದು ವರ್ಷದಲ್ಲಿ 1 ಕೋಟಿ ರೈತರನ್ನು ನೈಸರ್ಗಿಕ ಕೃಷಿ ವ್ಯಾಪ್ತಿಗೆ ತರಲಾಗುವುದು ಎಂದು ನಿರ್ಮಲಾ ಘೋಷಣೆ ಮಾಡಿದರು. ಸಾಮಾಜಿಕ ನ್ಯಾಯ, ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ. ವಿಕಸಿತ ಭಾರತಕ್ಕಾಗಿ ಬಜೆಟ್ನಲ್ಲಿ ಆದ್ಯತೆ ನೀಡಲಾಗಿದೆ. ಸೂಕ್ಷ್ಮ, ಸಣ್ಣ & ಮಧ್ಯಮ ಕೈಗಾರಿಕೆಗಳಿಗೆ ಪೂರಕವಾಗಿದೆ ಈ ಬಜೆಟ್ ಎಂದು ನಿರ್ಮಲಾ ಹೇಳಿದರು.
ಉದ್ಯೋಗ, ಕೌಶಲ್ಯವೃದ್ಧಿ, ಆರ್ಥಿಕತೆ ಬೆಳವಣಿಗೆಗೆ ಪೂರಕ ಬಜೆಟ್ ಇದಾಗಿರಲಿದ್ದು, ಶಿಕ್ಷಣ, ಉದ್ಯೋಗ, ಕೌಶಲ್ಯಾಭಿವೃದ್ಧಿಗಾಗಿ 1.48 ಲಕ್ಷ ಕೋಟಿ ಮೀಸಲು ಇಡುತ್ತಿದ್ದೇವೆ



Join Whatsapp
Exit mobile version