ರಾತ್ರೋರಾತ್ರಿ ಮನೆಗೆ ನುಗ್ಗಿ 1.76 ಕೋಟಿ ರೂ. ಸೇರಿದಂತೆ ಚಿನ್ನಾಭರಣ ಕಳವು: ಇಬ್ಬರ ಬಂಧನ !

Prasthutha|

ಬೆಂಗಳೂರು: ರಾತ್ರೋರಾತ್ರಿ ಮನೆಗೆ ನುಗ್ಗಿ 1.76 ಕೋಟಿ ರೂ. ಸೇರಿದಂತೆ ಚಿನ್ನಾಭರಣ ಕದ್ದಿದ್ದ ಇಬ್ಬರನ್ನು ಪೊಲೀಸರು  ಬಂಧಿಸಿದ್ದಾರೆ.

- Advertisement -

ಸುನಿಲ್ ಕುಮಾರ್ ಹಾಗೂ ದಿಲೀಪ್ ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ.

ರಾತ್ರಿ ಮನೆಗೆ ನುಗ್ಗಿ 1.76 ಕೋಟಿ ರೂಪಾಯಿ ನಗದು ಹಾಗೂ 12 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಕುಮಾರಸ್ವಾಮಿ ಲೇಔಟ್ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಹೆಚ್ಚಿನ ವಿಚಾರಣೆಗೊಳಪಡಿಸಲಾಗಿದೆ.

Join Whatsapp