Home ಟಾಪ್ ಸುದ್ದಿಗಳು ಭ್ರೂಣ ಹತ್ಯೆ ಸುಳಿವು ನೀಡಿದವರಿಗೆ 1 ಲಕ್ಷ ನಗದು ಬಹುಮಾನ: ಆರೋಗ್ಯ ಇಲಾಖೆ

ಭ್ರೂಣ ಹತ್ಯೆ ಸುಳಿವು ನೀಡಿದವರಿಗೆ 1 ಲಕ್ಷ ನಗದು ಬಹುಮಾನ: ಆರೋಗ್ಯ ಇಲಾಖೆ

ಬೆಂಗಳೂರು: ಭ್ರೂಣ ಹತ್ಯೆ ಸುಳಿವು ನೀಡಿದವರಿಗೆ ರೂ. 1 ಲಕ್ಷ ನಗದು ಬಹುಮಾನ ನೀಡುವುದಾಗಿ ಆರೋಗ್ಯ ಇಲಾಖೆ ಘೋಷಿಸಿದೆ. ಇದಲ್ಲದೇ ಸುಳಿವು ನೀಡುವವರ ಹೆಸರನ್ನು ಗೌಪ್ಯವಾಗಿಡಲಾಗುವುದು ಎಂದು ತಿಳಿಸಿದೆ.

ರಾಜ್ಯದ ಯಾವುದೇ ಭಾಗದ ಆಸ್ಪತ್ರೆಯಲ್ಲಿ ಭ್ರೂಣ ಲಿಂಗ ಪತ್ತೆ ನಡೆಯುತ್ತಿರುವ ಬಗ್ಗೆ ಸಾರ್ವಜನಿಕರು ಸ್ಪಷ್ಟವಾಗಿ ಆರೋಗ್ಯ ಇಲಾಖೆಗೆ ಮಾಹಿತಿ ನೀಡಿದವರಿಗೆ ಒಂದು ಲಕ್ಷಣ ರೂಪಾಯಿ ಬಹುಮಾನ ಹಣ ನೀಡುತ್ತೇವೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನು ಸಾರ್ವಜನಿಕರ ಸಹಾಯಕ್ಕಾಗಿ ಆರೋಗ್ಯ ಇಲಾಖೆ ಸಹಾಯವಾಣಿ ತೆರೆದಿದ್ದು, 080-25202264/65ಗೆ ಕರೆ ಮಾಡಿ ಮಾಹಿತಿ ನೀಡಬಹುದು ಎಂದು ತಿಳಿಸಿದೆ.

Join Whatsapp
Exit mobile version