ಮಂಗಳೂರು ವಿಮಾನ ನಿಲ್ದಾಣದಲ್ಲಿ 10.54 ಲಕ್ಷ ರೂ. ಮೌಲ್ಯದ ಚಿನ್ನ ವಶ

Prasthutha|

ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿದೇಶದಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಒಟ್ಟು 10.54 ಲಕ್ಷ ರೂ. ಮೌಲ್ಯದ ಚಿನ್ನವನ್ನು ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

- Advertisement -


ಸೆ.27 ರಂದು ದುಬೈನಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಯಾಣಿಕನ ತಪಾಸಣೆ ವೇಳೆ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 24 ಕ್ಯಾರೆಟ್ನ 176 ಗ್ರಾಂ ಚಿನ್ನ ಪತ್ತೆಯಾಗಿದ್ದು, ಇದರ ಮೌಲ್ಯ 1054240 ರೂ. ಎಂದು ಅಂದಾಜಿಸಲಾಗಿದೆ.


ಚಿನ್ನವನ್ನು ಏರ್ ಪೋಡ್ಸ್ , ಎರಡು ಮೊಬೈಲ್ ಮತ್ತು ವಾಚ್ ರೂಪದಲ್ಲಿ ಸಾಗಾಟ ಮಾಡಲು ಯತ್ನಿಸಿಲಾಗಿದ್ದು ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.

Join Whatsapp