ತಿಂಗಳ ಹಿಂದೆ ಸಿಎಂ ಬೊಮ್ಮಾಯಿ ಉದ್ಘಾಟಿಸಿದ್ದ 10 ಕೋಟಿ ರೂ.ವೆಚ್ಚದ ವಾಜಪೇಯಿ ಮೈದಾನದ ಗ್ಯಾಲರಿ ಕುಸಿತ

Prasthutha|

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ವರ್ಷದ ಮಾರ್ಚ್ ತಿಂಗಳಲ್ಲಿ ಬೆಂಗಳೂರಿನ ಎಚ್ ಎಸ್ ಆರ್ ಲೇಔಟ್ ನಲ್ಲಿ ಉದ್ಘಾಟಿಸಿದ್ದ ಆಟದ ಮೈದಾನದ ಪ್ರೇಕ್ಷಕರ ಗ್ಯಾಲರಿಯು ಸಂಪೂರ್ಣ ಕುಸಿದು ಬಿದ್ದಿದೆ.

- Advertisement -

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ (ಬಿಬಿಎಂಪಿ) ಸೇರಿದ ಅಟಲ್ ಬಿಹಾರಿ ವಾಜಪೇಯಿ ಆಟದ ಮೈದಾನವನ್ನು ಮಾರ್ಚ್ 2 ರಂದು ಬೊಮ್ಮಾಯಿ ಉದ್ಘಾಟಿಸಿದ್ದರು. ಸರಿಸುಮಾರು 10 ಕೋಟಿ ರೂ.ಗಳ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾದ ಈ ಆಟದ ಮೈದಾನದ ಗ್ಯಾಲರಿಯು ಒಂದೇ ತಿಂಗಳಲ್ಲಿ ಸಂಪೂರ್ಣವಾಗಿ ಕುಸಿದುಬಿದ್ದಿದೆ.

10 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿದ್ದರೂ ತಿಂಗಳೊಳಗೆ ಕುಸಿದು ಬಿದ್ದ ಗ್ಯಾಲರಿಯನ್ನು ಕಂಡು ಜನಸಾಮಾನ್ಯರು ಕಳಪೆ ಕಾಮಗಾರಿಯ ಬಗ್ಗೆ ದೂರುತ್ತಿದ್ದಾರೆ. ಅದೇ ರೀತಿ ಎರಡು ತಿಂಗಳ ಹಿಂದೆ ಮಲ್ಪೆಯಲ್ಲಿ 80 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗಿದ್ದ ರಾಜ್ಯದ ಮೊದಲು ತೇಲುವ ಸೇತುವೆಯೂ ಎರಡು ದಿನದೊಳಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ದೃಶ್ಯವೂ ಈಗ ಸಾಮಾಜಿಕ ತಾಣಗಳಲ್ಲಿ ಹರಿದಾಡುತ್ತಿದೆ.

- Advertisement -

ಕಳಪೆ ಕಾಮಗಾರಿ ಹಾಗೂ ಭ್ರಷ್ಟಾಚಾರವೇ ಈ ಎಲ್ಲಾ ದುರಂತಗಳಿಗೆ ಕಾರಣ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.



Join Whatsapp