Home ಟಾಪ್ ಸುದ್ದಿಗಳು ಉದಯನಿಧಿ ಸ್ಟಾಲಿನ್ ತಲೆ ತಂದವರಿಗೆ 10 ಕೋಟಿ ಬಹುಮಾನ ಘೋಷಣೆ: ಮಹಾಂತ ಪರಮಹಂಸ ದಾಸ್

ಉದಯನಿಧಿ ಸ್ಟಾಲಿನ್ ತಲೆ ತಂದವರಿಗೆ 10 ಕೋಟಿ ಬಹುಮಾನ ಘೋಷಣೆ: ಮಹಾಂತ ಪರಮಹಂಸ ದಾಸ್

ನವದೆಹಲಿ: ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ ಅವರ ಪುತ್ರ, ಸಚಿವ ಉದಯನಿಧಿ ಸ್ಟಾಲಿನ್ ಅವರ ತಲೆ ಕತ್ತರಿಸಿದವರಿಗೆ 10 ಕೋಟಿ ರೂಪಾಯಿ ಬಹುಮಾನ ನೀಡಲಾಗುವುದು ಎಂದು ಅಯೋಧ್ಯಾ ತಪಸ್ವಿ ಛಾವನಿಯ ಮಹಾಂತ ಪರಮಹಂಸ ದಾಸ್ ಅವರು ಸೋಮವಾರ ಘೋಷಿಸಿದ್ದಾರೆ.


ಮಹಾಂತ ಪರಮಹಂಸ ದಾಸ್, ಒಂದು ಕೈಯಲ್ಲಿ ಉದಯನಿಧಿಯ ಪೋಸ್ಟರ್, ಮತ್ತೊಂದು ಕೈಯಲ್ಲಿ ಕತ್ತಿ ಹಿಡಿದುಕೊಂಡು ಉದಯನಿಧಿ ಅವರ ಶಿರಚ್ಛೇದನವನ್ನು ಸಾಂಕೇತಿಕವಾಗಿ ಪ್ರದರ್ಶಿಸುವ ವೀಡಿಯೊವನ್ನ ಬಿಡುಗಡೆ ಮಾಡಿದ್ದಾರೆ. ಅಲ್ಲದೇ ಡಿಎಂಕೆ ಸಚಿವರ ತಲೆ ಕಡಿದು ತಂದವರಿಗೆ 10 ಕೋಟಿ ರೂ. ಬಹುಮಾನ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಉದಯನಿಧಿ ಸ್ಟಾಲಿನ್ ಅವರು ‘ಸನಾತನ ಧರ್ಮ’ ವಿರೋಧಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಮಹಾಂತ ಪರಮಹಂಸ ದಾಸ್ ಅವರು ಈ ಘೋಷಣೆ ಮಾಡಿದ್ದಾರೆ.

Join Whatsapp
Exit mobile version