ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಅಭಿವೃದ್ದಿಗೆ 100 ಕೋಟಿ ರೂ. ಅನುದಾನ ತಂದಿದ್ದೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರಗೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ತಿರುಗೇಟು ನೀಡಿದ್ದಾರೆ.
‘ಪ್ರದೀಪ್ ಈಶ್ವರ್ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ತಂದಿಲ್ಲ’ ಎಂಬ ವಿಜಯೇಂದ್ರ ಹೇಳಿಕೆಗೆ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿ.ವೈ.ವಿಜಯೇಂದ್ರ ಪಕ್ಕ ಇದ್ದವರು ಮಿಸ್ ಗೈಡ್ ಮಾಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಅಸಲಿ ಮಾಹಿತಿ ನೀಡುತ್ತೇನೆ ಎಂದರು. ಸಿಎಂ ಸಿದ್ದರಾಮಯ್ಯರನ್ನು ಆಧುನಿಕ ಬಸವಣ್ಣ ಎನ್ನಬಹುದು. ಎಲ್ಲಾ ಸಮುದಾಯಗಳಿಗೆ ನ್ಯಾಯ ಕೊಡಿಸುವ ಕೆಲಸ ಮಾಡುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಆಧುನಿಕ ಅಭಿವೃದ್ಧಿಯ ಹರಿಕಾರರಾಗಿದ್ದಾರೆ ಎಂದು ಹಾಡಿಹೊಗಳಿದ್ದಾರೆ.