100 ಕೋಟಿ ರೂ.ಮಾನನಷ್ಟ ಮೊಕದ್ದಮೆ: ಧೋನಿ ಅರ್ಜಿಗೆ ತಡೆ ನೀಡಲು ಹೈಕೋರ್ಟ್ ನಕಾರ

Prasthutha|

ಚೆನ್ನೈ: ತಮ್ಮ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಎಂ.ಎಸ್ ಧೋನಿ ದಾಖಲಿಸಿರುವ 100 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆಯನ್ನು ಕೈಬಿಡುವಂತೆ ಕೋರಿ ಐಪಿಎಸ್ ಅಧಿಕಾರಿ ಜಿ. ಸಂಪತ್ ಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ತಿರಸ್ಕರಿಸಿದೆ.

- Advertisement -


ನ್ಯಾಯಮೂರ್ತಿ ಎನ್. ಶೇಷಸಾಯಿ ಅವರ ತೀರ್ಪಿನಲ್ಲಿ, ‘ಪ್ರಕರಣದ ವಿಚಾರಣೆಯು 2014ರಿಂದ ನಡೆಯುತ್ತಿದ್ದು, ಅರ್ಜಿದಾರರ ವಾದವನ್ನು ಈ ಸಮಯದಲ್ಲಿ ಪುರಸ್ಕರಿದರೆ ಅದು ತನಿಖೆಯ ಪ್ರಗತಿಯ ಮೇಲೆ ಪರಿಣಾಮ ಬೀರಲಿದೆ’ ಎಂದು ಅಭಿಪ್ರಾಯಪಟ್ಟಿದ್ದಾರೆ.


2013ರಲ್ಲಿ ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಪ್ರಕರಣದಲ್ಲಿ ಎಂ.ಎಸ್ ಧೋನಿ ಭಾಗಿಯಾಗಿದ್ದಾರೆ ಎಂದು ಮಾನಹಾನಿಕರ ಹಾಗೂ ಸುಳ್ಳು ಸುದ್ದಿ ಮತ್ತು ಹೇಳಿಕೆಗಳನ್ನು ನೀಡಿದ ಕಾರಣಕ್ಕಾಗಿ ಪ್ರಮುಖ ಮಾಧ್ಯಮ ಸಂಸ್ಥೆ ಹಾಗೂ ಐಪಿಎಸ್ ಅಧಿಕಾರಿ ಜಿ. ಸಂಪತ್ ಕುಮಾರ್ ವಿರುದ್ಧ 100 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿತ್ತು. ಜಗತ್ತಿನಾದ್ಯಂತವಿರುವ ಅಭಿಮಾನಿಗಳ ದೃಷ್ಟಿಯಲ್ಲಿ ಧೋನಿ ವ್ಯಕ್ತಿತ್ವಕ್ಕೆ ಕಳಂಕವನ್ನುಂಟುಮಾಡುವ ಪ್ರಯತ್ನ ಮಾಡಲಾಗಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿತ್ತು.

- Advertisement -


2013ರಲ್ಲಿ ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಮತ್ತು ಬೆಟ್ಟಿಂಗ್ ಪ್ರಕರಣದಲ್ಲಿ ಶ್ರೀಶಾಂತ್, ಅಂಕಿತ್ ಚೌಹಾನ್ ಹಾಗೂ ಅಂಕಿತ್ ಚಾಂಡಿಲಾರನ್ನು ಬಂಧಿಸಲಾಗಿತ್ತು. ಜೊತೆಗೆ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳಿಗೆ ಎರಡು ವರ್ಷಗಳ ಕಾಲ IPLನಿಂದ ನಿಷೇಧ ಹೇರಲಾಗಿತ್ತು.

Join Whatsapp