ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿಗೆ 1 ಸಾವಿರ ಕೋಟಿ ರೂ. ಕ್ರಿಯಾ ಯೋಜನೆ ರೂಪಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

Prasthutha|

ಬೆಂಗಳೂರು: ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿಗೆ ಸಾವಿರ ಕೋಟಿ ರೂ.ಗಳ ಕ್ರಿಯಾ ಯೋಜನೆ ರೂಪಿಸಲು ಸಿಎಂ ಸಿದ್ದರಾಮಯ್ಯ ಸೂಚಿಸಿದರು.

- Advertisement -

ಇಂದು ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಸತಿ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದ ಸಿಎಂ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜೊತೆಗೆ ಅಲ್ಪಸಂಖ್ಯಾತರು ಹೆಚ್ಚಾಗಿ ನೆಲೆಸಿರುವ ಪ್ರದೇಶಗಳನ್ನು ಗುರುತಿಸಿ, ಅನುದಾನ ಹಂಚಿಕೆ ಮಾಡುವಂತೆ ಸೂಚಿಸಿದರು.

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ ನೀಡುತ್ತಿದ್ದ ವಿದ್ಯಾರ್ಥಿ ವೇತನ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವೇ ಇದನ್ನು ಭರಿಸಲು ತೀರ್ಮಾನಿಸಿದ್ದು, 6.4 ಲಕ್ಷ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಬಿಡುಗಡೆಗೆ ಸಿದ್ಧವಾಗಿದೆ. ಆಯವ್ಯಯದಲ್ಲಿ 60 ಕೋಟಿ ರೂ. ನಿಗದಿಯಾಗಿದ್ದು, ಇಲಾಖೆಗೆ ಲಭ್ಯವಿರುವ ಅನುದಾನದಲ್ಲಿಯೇ ಮರುಹಂಚಿಕೆ ಮಾಡಿ ಹೆಚ್ಚುವರಿ 40 ಕೋಟಿ ಭರಿಸಲು ಸಿಎಂ ಸೂಚಿಸಿದರು.

Join Whatsapp