Home ಟಾಪ್ ಸುದ್ದಿಗಳು ಒಂದು ವರ್ಷಕ್ಕೆ ರಾಜ್ಯಕ್ಕೆ ಬರಬೇಕಾದ 14 ಸಾವಿರ ಕೋಟಿ ರೂ. ಪಾಲು ಕುಂಟಿತ: ಕೃಷ್ಣ ಭೈರೇಗೌಡ

ಒಂದು ವರ್ಷಕ್ಕೆ ರಾಜ್ಯಕ್ಕೆ ಬರಬೇಕಾದ 14 ಸಾವಿರ ಕೋಟಿ ರೂ. ಪಾಲು ಕುಂಟಿತ: ಕೃಷ್ಣ ಭೈರೇಗೌಡ

ಬೆಂಗಳೂರು: 16ನೇ ಹಣಕಾಸು ಆಯೋಗ ರಚಿಸಲು ಕೇಂದ್ರ ಅಧಿಸೂಚನೆ ಹೊರಡಿಸಿದೆ. ಈ ಹಿನ್ನೆಲೆ ಹಣಕಾಸು ಆಯೋಗದ ಮುಂದೆ ಏನು ವಾದ ಮಂಡಿಸಬೇಕೆಂದು ಚರ್ಚೆಯಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದ್ದಾರೆ.

ವಿಧಾನಸೌಧದಲ್ಲಿ ಸಂಪುಟ ಸಭೆ ನಂತರ ಮಾತನಾಡಿದ ಅವರು ‘ರಾಜ್ಯದ ಪರ ಸಮರ್ಥ ವಾದ ಮಂಡನೆಗೆ ಸಲಹಾ ಸಮಿತಿ ರಚನೆಗೆ ತೀರ್ಮಾನಿಸಲಾಗಿದೆ. 4 ಲಕ್ಷ ಕೋಟಿ ರೂಪಾಯಿ ತೆರಿಗೆ ರೂಪದಲ್ಲಿ ಕೇಂದ್ರ ಸರ್ಕಾರಕ್ಕೆ ಸಲ್ಲಿಕೆಯಾಗುತ್ತಿದೆ. ಆದರೆ, ಅದರಲ್ಲಿ ರಾಜ್ಯಕ್ಕೆ 60-70 ಸಾವಿರ ಕೋಟಿ ಮಾತ್ರ ಬರುತ್ತಿದೆ. ಒಂದು ವರ್ಷಕ್ಕೆ 14 ಸಾವಿರ ಕೋಟಿ ರಾಜ್ಯಕ್ಕೆ ಬರಬೇಕಾದ ಪಾಲು ಕುಂಟಿತ ಆಗಿದ್ದು, 5 ವರ್ಷದಲ್ಲಿ 62 ಸಾವಿರ ಕೋಟಿ ನಷ್ಟ ಉಂಟಾಗುತ್ತದೆ ಎಂದರು.

Join Whatsapp
Exit mobile version