ಕಾಡುಪ್ರಾಣಿಗಳ ದಾಳಿಯಿಂದ ಮೃತಪಟ್ಟವರ ಕುಟುಂಬದವರಿಗೆ 15 ಲಕ್ಷ ರೂ.ಪರಿಹಾರ: ಜೆ.ಸಿ.ಮಾಧುಸ್ವಾಮಿ

Prasthutha|

ಬೆಂಗಳೂರು: ಕಾಡುಪ್ರಾಣಿಗಳ ದಾಳಿಯಿಂದ ಮೃತಪಟ್ಟವರ ಕುಟುಂಬದವರಿಗೆ ನೀಡುವ ಪರಿಹಾರ ಮೊತ್ತವನ್ನು ಏಳೂವರೆ ಲಕ್ಷ ರೂಪಾಯಿಯಿಂದ 15 ಲಕ್ಷಕ್ಕೆ ಏರಿಸಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ವಿಧಾನಪರಿಷತ್ತಿಗಿಂದು ತಿಳಿಸಿದ್ದಾರೆ.

- Advertisement -


ಪ್ರಶ್ನೋತ್ತರ ಕಲಾಪದಲ್ಲಿ ಅವರು, ಅರಣ್ಯ ಇಲಾಖೆ ಅಧಿಕಾರಿಗಳು ಮೃತಪಟ್ಟಲ್ಲಿ ಅವರ ಕುಟುಂಬಗಳಿಗೆ ನೀಡಲಾಗುವ ಪರಿಹಾರ ಮೊತ್ತವನ್ನು 10 ಲಕ್ಷ ರೂಪಾಯಿಯಿಂದ 50 ಲಕ್ಷಕ್ಕೆ ಹೆಚ್ಚಿಸಲಾಗಿದೆ ಎಂದು ತಿಳಿಸಿದರು.



Join Whatsapp