ವಕ್ಫ್ ಆಸ್ತಿಗಳ ದುರಸ್ತಿ- ನವೀಕರಣಕ್ಕೆ 150 ಕೋಟಿ ರೂ. ಮೀಸಲು: ಸಿದ್ದರಾಮಯ್ಯ ಘೋಷಣೆ

- Advertisement -

ಬೆಂಗಳೂರು: ಸಿಎಂ ಸಿದ್ದರಾಮಯ್ಯನವರು ವಿಧಾನಸಭೆಯಲ್ಲಿ ಇಂದು 2025-26ನೇ ಸಾಲಿನ ರಾಜ್ಯ ಬಜೆಟ್ ಮಂಡಿಸುತ್ತಿದ್ದಾರೆ. ಈ ಮೂಲಕ ಅತಿ ಹೆಚ್ಚು ಬಾರಿ ಆಯವ್ಯಯ ಮಂಡಿಸಿದ ತಮ್ಮದೇ ದಾಖಲೆಯನ್ನು ಮುರಿದಿದ್ದಾರೆ.

- Advertisement -

ವಕ್ಫ್ ಆಸ್ತಿಗಳ ದುರಸ್ತಿ- ನವೀಕರಣಕ್ಕೆ 150 ಕೋಟಿ ರೂ. ಮೀಸಲು
ವಕ್ಫ್ ಆಸ್ತಿಗಳ ದುರಸ್ತಿ ಮತ್ತು ನವೀಕರಣಕ್ಕಾಗಿ ಮತ್ತು ಮುಸ್ಲಿಂ ಕಬರ್ ಸ್ಥಾನ ರಕ್ಷಣೆ, ಮೂಲಸೌಕರ್ಯಕ್ಕಾಗಿ 150 ಕೋಟಿ ರೂ.ಗಳನ್ನು ಒದಗಿಸಲಾಗಿದೆ.

ಮಲ್ಟಿಫ್ಲೆಕ್ಸ್ ಗಳಲ್ಲಿ ಸಿನಿಮಾ ಟಿಕೆಟ್ ಗೆ 200 ರೂಪಾಯಿ ನಿಗದಿ
ಸಿನಿಮಾ ಕ್ಷೇತ್ರವನ್ನ ಸಿನಿಮಾ ಉದ್ಯಮ ಎಂದು ಪರಿಗಣಿಸಿ ಕೈಗಾರಿಕಾ ನೀತಿಯಡಿ ತರಲು ನಿರ್ಧಾರ ಮಾಡಲಾಗಿದೆ. ಕನ್ನಡ ಸಿನಿಮಾಗಳಿಗೆ OTT ವೇದಿಕೆ ಸೃಷ್ಟಿಸಲು ನಿರ್ಧರಿಸಲಾಗಿದೆ. ಎಲ್ಲ ಚಿತ್ರಮಂದಿರಗಳಲ್ಲೂ ಸಿನಿಮಾ ಟಿಕೆಟ್ ದರ 200 ರೂ.ಗೆ ನಿಗದಿ ಪಡಿಸಲಾಗುವುದು. ಈ ಮೂಲಕ ಸರ್ಕಾರ ಮಲ್ಟಿಫ್ಲೆಕ್ಸ್ಗಳಲ್ಲಿ ಏಕರೂಪದ ದರನಿಗದಿಗೊಳಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ನಕ್ಸಲ್ ಪೀಡಿತ ಪ್ರದೇಶಗಳ ಅಭಿವೃದ್ಧಿಗೆ ನಕ್ಸಲ್ ಪ್ಯಾಕೇಜ್
ನಕ್ಸಲ್ ಪೀಡಿತ ಪ್ರದೇಶಗಳ ಮೂಲಸೌಕರ್ಯ ಅಭಿವೃದ್ಧಿಗೆ ರಾಜ್ಯ ಸರ್ಕಾರ ನಕ್ಸಲ್ ಪ್ಯಾಕೇಜ್ ಘೋಷಣೆ ಮಾಡಿದ್ದು, 10 ಕೋಟಿ ರೂ. ಅನುದಾನ ಘೋಷಣೆ ಮಾಡಲಾಗಿದೆ.
SC/ST ಸಮುದಾಯಕ್ಕೆ ಕಾಮಗಾರಿಗಳಲ್ಲಿ ಮೀಸಲಾತಿ
ಎಸ್ಸಿ, ಎಸ್ಟಿ ಸಮುದಾಯಕ್ಕೆ 2 ಕೋಟಿ ರೂಪಾಯಿಯವರೆಗಿನ ಕಾಮಗಾರಿಗಳಲ್ಲಿ ಮೀಸಲಾತಿ ನೀಡಲಾಗುವುದು. ಎಸ್ಸಿಪಿ ಟಿಎಸ್ಪಿ ಯೋಜನೆಗೆ 42018 ಕೋಟಿ ರೂ. ಮೀಸಲು ಇಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ.

- Advertisement -


Must Read

Related Articles