Home ಟಾಪ್ ಸುದ್ದಿಗಳು ರೈತರ ಪರಿಹಾರಕ್ಕೆ ದುಡ್ಡಿಲ್ಲ, ಕಾಂಗ್ರೆಸ್ ಚೇಲಾಗಳಿಗೆ ಮಜಾ ಮಾಡಲು ಮಾತ್ರ 150 ಕೋಟಿ ರೂ. ಇದೆ:...

ರೈತರ ಪರಿಹಾರಕ್ಕೆ ದುಡ್ಡಿಲ್ಲ, ಕಾಂಗ್ರೆಸ್ ಚೇಲಾಗಳಿಗೆ ಮಜಾ ಮಾಡಲು ಮಾತ್ರ 150 ಕೋಟಿ ರೂ. ಇದೆ: ಆರ್.ಅಶೋಕ್

ಬೆಂಗಳೂರು: ರೈತರಿಗೆ ಪರಿಹಾರ ನೀಡಲು ಕಾಂಗ್ರೆಸ್‌ ಸರ್ಕಾರದ ಬಳಿ ಹಣವಿಲ್ಲ. ಆದರೆ ಕಾಂಗ್ರೆಸ್‌ನ ಚೇಲಾಗಳಿಗೆ ಬಿರಿಯಾನಿ ಊಟ ಕೊಡಿಸಲು, ಮಜಾ ಮಾಡಲು ಮಾತ್ರ 150 ಕೋಟಿ ರೂ. ಇದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬರಗಾಲದಲ್ಲಿ ಸಂಕಷ್ಟದಲ್ಲಿರುವ ರೈತರಿಗೆ ಪರಿಹಾರವಾಗಿ ಕಾಂಗ್ರೆಸ್‌ ಸರ್ಕಾರ 100 ಕೋಟಿ ರೂ.ಬಿಡುಗಡೆಗೊಳಿಸುತ್ತಿದೆ. ನ್ಯಾಯವಾಗಿ 3-4 ಸಾವಿರ ಕೋಟಿ ರೂ. ನೀಡಬೇಕಿತ್ತು. ಈಗ ಗ್ಯಾರಂಟಿ ಜಾರಿ ಸಮಿತಿ 3 ಸಾವಿರ ಕಾಂಗ್ರೆಸ್‌ ಕಾರ್ಯಕರ್ತರಿಗೆ 25 ಕೋಟಿ ರೂ. ಖರ್ಚು ಮಾಡಲಾಗುತ್ತದೆ. ಅಂದರೆ ಐದು ವರ್ಷಕ್ಕೆ 150 ಕೋಟಿ ರೂ. ಆಗಲಿದೆ. ಕಾಂಗ್ರೆಸ್‌ ಚೇಲಾಗಳಿಗೆ ಮಜಾ ಮಾಡಲು ಇಷ್ಟು ಹಣ ಖರ್ಚು ಮಾಡಲಾಗುತ್ತಿದೆ. ಅವರಿಗೆ ಕ್ಯಾಬಿನೆಟ್‌ ದರ್ಜೆ ನೀಡಲಾಗುತ್ತದೆ. ಸರ್ಕಾರ ರೈತರಿಗೆ ಯಾವಾಗ ಕ್ಯಾಬಿನೆಟ್‌ ದರ್ಜೆಯ ಗೌರವ ಕೊಟ್ಟು ಪರಿಹಾರ ನೀಡಲಿದೆ ಎಂದು ಪ್ರಶ್ನಿಸಿದರು.

Join Whatsapp
Exit mobile version