ಕಲಬುರಗಿಯನ್ನು ಸ್ಮಾರ್ಟ್ ಸಿಟಿ ಮಾಡಲು 1685 ಕೋಟಿ ರೂ: ಸಿಎಂ ಸಿದ್ದರಾಮಯ್ಯ ಘೋಷಣೆ

Prasthutha|

ಕಲಬುರಗಿ: ಕಲಬುರಗಿಯನ್ನು 1685 ಕೋಟಿ ರೂ. ವೆಚ್ಚದ ಯೋಜನೆಯೊಂದಿಗೆ ರಾಜ್ಯ ಸರ್ಕಾರದ ವತಿಯಿಂದಲೇ ಸ್ಮಾರ್ಟ್ ಸಿಟಿಯನ್ನಾಗಿ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದರು.

- Advertisement -


76ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯಲ್ಲಿ ಭಾಗವಹಿಸಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಕಲಬುರಗಿಯನ್ನು ಸ್ಮಾರ್ಟ್ ಸಿಟಿ ಮಾಡುವುದಕ್ಕೆ ಚಿಂತನೆ ನಡೆಸಿದ್ದೇವೆ. ಕಲ್ಯಾಣ ಕರ್ನಾಟಕ ರಸ್ತೆ ಅಭಿವೃದ್ಧಿ ಪಡಿಸಲು ಯೋಜನೆ ಹಾಗೂ ಕಲ್ಯಾಣ ಪಥ ಯೋಜನೆ ರೂಪಿಸಲಾಗಿದೆ. ಇದಕ್ಕಾಗಿ ಸರ್ಕಾರದಿಂದ 1 ಸಾವಿರ ಕೋಟಿ ರೂ. ಮೀಸಲಿಡಲಾಗಿದೆ ಎಂದರು.


ಕಲಬುರಗಿ ಜಯದೇವ ಆಸ್ಪತ್ರೆ ಉದ್ಘಾಟನಾ ಹಂತದಲ್ಲಿದೆ. ಇಂದಿರಾ ಗಾಂಧಿ ಚೈಲ್ಡ್ ಕೇರ್ ಘಟಕಕ್ಕೂ ಅನುಮೋದನೆ ನೀಡಲಾಗಿದೆ ಎಂದು ಮುಖ್ಯಮಂತ್ರಿಗಳು ಮಾಹಿತಿ ನೀಡಿದರು.

- Advertisement -


ಇಂದಿರಾಗಾಂಧಿ ಚೈಲ್ಡ್ ಕೇರ್ ಘಟಕಕ್ಕೂ ಅನುಮೋದನೆ ನೀಡಿದ್ದೇವೆ. ಆ ಮೂಲಕ ಕಲಬುರಗಿಯನ್ನು ರೀಜನಲ್ ಹೆಲ್ತ್ ಹಬ್ ಮಾಡುವತ್ತ ಹೆಜ್ಜೆ ಇಟ್ಟಿದ್ದೇವೆ. ಈ ಭಾಗದ ಶೈಕ್ಷಣಿಕ ಪರಿಸ್ಥಿತಿ ಸುಧಾರಿಸಲು 2023-24 ಅನ್ನು ‘Year of education’ ಎಂದು ಘೋಷಣೆ ಮಾಡಿದ್ದೇವೆ. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ‘ಅಕ್ಷರ ಅವಿಷ್ಕಾರ ಯೋಜನೆ’ ಜಾರಿಗೊಳಿಸಿದ್ದೇವೆ ಎಂದರು.



Join Whatsapp